BIG NEWS: ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವೆಂಬ ಶಾಮನೂರು ಹೇಳಿಕೆ ಮುಗಿದ ಅಧ್ಯಾಯ: HK ಪಾಟೀಲ್ | Kannada Dunia | Kannada News | Karnataka News
05-10-2023 7:25PM IST
/
No Comments /
Posted In: Karnataka, Latest News, Live News
ಬೆಂಗಳೂರು: ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಹೆಚ್.ಕೆ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾತನಾಡಿದ ಹೆಚ್.ಕೆ. ಪಾಟೀಲ್, ಮಾಹಿತಿ ಕೊರತೆಯಿಂದ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದರು. ಈಗಾಗಲೇ ಮಾಹಿತಿ ನೀಡುವ ಕೆಲಸವನ್ನು ಕೆಲವು ಶಾಸಕರೇ ಮಾಡಿದ್ದಾರೆ. ಸರಿಯಾದ ಮಾಹಿತಿ ಈಗಾಗಲೇ ಪಬ್ಲಿಕ್ ಡೊಮೇನ್ ಗೆ ಬಂದಿದೆ. ಹೀಗಾಗಿ ಶಾಮನೂರು ಅವರಿಗೂ ತಪ್ಪು ಮಾಹಿತಿ ಏನಿತ್ತು ಎಂಬುದು ಗೊತ್ತಾಗಿದೆ ಎಂದು ಹೇಳಿದ್ದಾರೆ.
ಕೆಲವು ಶಾಸಕರು ನೀಡಿರುವ ಮಾಹಿತಿ ಇದಾಗಿದೆ. ಇದು ಸರ್ಕಾರ ಬಿಡುಗಡೆ ಮಾಡಿದ್ದಲ್ಲ. ಯಾರೋ ಕೆಲವು ಅಧಿಕಾರಿಗಳು ಶಾಮನೂರು ಅವರಿಗೆ ತಪ್ಪು ಮಾಹಿತಿ ನೀಡಿದ್ದರು. ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರ ಮುಗಿದ ಅಧ್ಯಾಯ ಎಂದು ಹೆಚ್.ಕೆ. ಪಾಟೀಲ್ ಹೇಳಿದ್ದಾರೆ.