17-11-2023 7:29PM IST
/
No Comments /
Posted In: Karnataka, Latest News, Live News
ಬೆಂಗಳೂರು: ಐಟಿಸಿ ಗಾರ್ಡೇನಿಯಾ ಹೋಟೆಲ್ ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕಾಂಗ ಸಭೆಗೆ 5 ಶಾಸಕರು ಗೈರು ಹಾಜರಾಗಿದ್ದಾರೆ.
ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್, ಬಾಲಚಂದ್ರ ಜಾರಕಿಹೊಳಿ. ರಮೇಶ ಜಾರಕಿಹೊಳಿ ಗೈರು ಹಾಜರಾಗಿದ್ದಾರೆ.
ಎಸ್.ಟಿ. ಸೋಮಶೇಖರ್ ದೆಹಲಿಗೆ ತೆರಳುವುದಾಗಿ ನಿನ್ನೆಯೇ ಹೇಳಿದ್ದರು. ಬಾಲಚಂದ್ರ ಜಾರಕಿಹೊಳಿ ಮತ್ತು ರಮೇಶ ಜಾರಕಿಹೊಳಿ ಸಭೆ ಬಹಿಷ್ಕರಿಸಿದ್ದಾರೆ. ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಭೆ ಆರಂಭಕ್ಕೆ ಮೊದಲೇ ಹೊರ ನಡೆದಿದ್ದಾರೆ. ಶಿವರಾಮ ಹೆಬ್ಬಾರ್ ಕೂಡ ಸಭೆಯಿಂದ ದೂರ ಉಳಿದಿದ್ದಾರೆ.