ಕುಮಾರಸ್ವಾಮಿಗೆ ಬೃಹತ್ ಕೈಗಾರಿಕೆ, ಜೋಶಿಗೆ ಆಹಾರ ಖಾತೆ: ರಾಜ್ಯದ ಐದು ಮಂದಿಗೆ ಖಾತೆ ಹಂಚಿಕೆ | Kannada Dunia | Kannada News | Karnataka News
10-06-2024 8:39PM IST
/
No Comments /
Posted In: Latest News, India, Live News
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದು, ಕರ್ನಾಟಕದಿಂದ ಆಯ್ಕೆಯಾದ ಐವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.
ಮೂವರು ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದು, ಇಬ್ಬರು ರಾಜ್ಯ ಖಾತೆ ಸಚಿವರಾಗಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಲಾಗಿದೆ.
ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಖಾತೆ ನೀಡಲಾಗಿದೆ.
ಪ್ರಹ್ಲಾದ್ ಜೋಶಿ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ನವೀಕರಿಸಬಹುದಾದ ಇಂಧನ ಇಲಾಖೆ ಖಾತೆ ನೀಡಲಾಗಿದೆ.
ರಾಜ್ಯ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ ಅವರಿಗೆ ಸೂಕ್ಷ್ಮ, ಸಣ್ಣ, ಮಧ್ಯಮ ಕೈಗಾರಿಕೆ ಖಾತೆ ನೀಡಲಾಗಿದೆ.
ರಾಜ್ಯ ಖಾತೆ ಸಚಿವರಾದ ವಿ. ಸೋಮಣ್ಣ ಅವರಿಗೆ ಜಲ ಶಕ್ತಿ, ರೈಲ್ವೆ ಸಚಿವಾಲಯದ ರಾಜ್ಯ ಖಾತೆ ನೀಡಲಾಗಿದೆ.