EBM News Kannada
Leading News Portal in Kannada

ನಟ ದರ್ಶನ್ ಬಂಧನ ಹೊತ್ತಲ್ಲೇ ಗಮನಸೆಳೆದ ಪುತ್ರ ವಿನೀಶ್ ಪೋಸ್ಟ್ | Kannada Dunia | Kannada News | Karnataka News

0


ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ.

ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಪ್ರಕರಣದ ಬಗ್ಗೆ ಯಾವುದೇ ಕಾಮೆಂಟ್ ಮಾಡಿಲ್ಲ. ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ದರ್ಶನ್ ಜೊತೆಗಿದ್ದ ಫೋಟೋವನ್ನು ಡಿಲೀಟ್ ಮಾಡಿದ್ದಾರೆ.

ದರ್ಶನ್ ಮತ್ತು ವಿಜಯಲಕ್ಷ್ಮಿ ಅವರ ಪುತ್ರ 15 ವರ್ಷದ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ಮಾಡಿರುವ ಪೋಸ್ಟ್ ಗಮನ ಸೆಳೆದಿದೆ. ಪ್ರಕರಣದ ಬಗ್ಗೆ ಅವರಿಗೆ ಬರುತ್ತಿರುವ ಒತ್ತಡ ಮತ್ತು ಕೆಟ್ಟ ಕಾಮೆಂಟ್ ಗಳ ಕುರಿತಾಗಿ ವಿನೀಶ್ ಇನ್ಸ್ಟಾಗ್ರಾಮ್ ಸ್ಟೋರಿ ಹಂಚಿಕೊಂಡಿದ್ದಾರೆ.

“ನನ್ನ ತಂದೆ ಬಗ್ಗೆ ಕೆಟ್ಟ ಕಾಮೆಂಟ್ಸ್ ಮತ್ತು ಅಸಭ್ಯ ಭಾಷೆಯಲ್ಲಿ ನಿಂದಿಸುತ್ತಿರುವವರಿಗೆ ಧನ್ಯವಾದಗಳು. ನನಗೆ 15 ವರ್ಷ ನನಗೂ ಮನಸ್ಸಿದೆ. ಈ ಕಷ್ಟದ ಸಮಯದಲ್ಲಿ ನನ್ನ ತಾಯಿ ಮತ್ತು ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನನಗೆ ಶಾಪ ಹಾಕಿದರೆ ಯಾವ ಬದಲಾವಣೆಯೂ ಆಗುವುದಿಲ್ಲ. ಎಲ್ಲರಿಗೂ ಧನ್ಯವಾದಗಳು” ಎಂದು ಪೋಸ್ಟ್ ಹಾಕಿದ್ದಾರೆ.

Leave A Reply

Your email address will not be published.