BIG BREAKING: ಡಬಲ್ ಡೆಕ್ಕರ್ ಬಸ್ – ಟ್ಯಾಂಕರ್ ಮುಖಾಮುಖಿ; 18 ಮಂದಿ ಸಾವು | Kannada Dunia | Kannada News | Karnataka News
10-07-2024 8:44AM IST
/
No Comments /
Posted In: Latest News, India, Live News
ದೆಹಲಿಗೆ ತೆರಳುತ್ತಿದ್ದ ಡಬಲ್ ಡೆಕರ್ ಬಸ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಆದ ಪರಿಣಾಮ 18 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಉತ್ತರ ಪ್ರದೇಶದ ಉನ್ನಾವೋ ಸಮೀಪದ ಲಕ್ನೋ – ಆಗ್ರಾ ಎಕ್ಸ್ಪ್ರೆಸ್ ವೇ ನಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ದೇಹಗಳು ಎಲ್ಲೆಂದರಲ್ಲಿ ಬಿದ್ದಿದ್ದವು.
ಸ್ಥಳದಲ್ಲಿ ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಭೀತಿ ವ್ಯಕ್ತವಾಗಿದೆ.