ಹಿಜಾಬ್ ಗೆ ನಿರ್ಬಂಧ ಹೇರಿದ್ದ ಪ್ರಾಂಶುಪಾಲರ ಉತ್ತಮ ಶಿಕ್ಷಕ ಪ್ರಶಸ್ತಿ ವಾಪಸ್ | Kannada Dunia | Kannada News | Karnataka News
05-09-2024 7:25AM IST
/
No Comments /
Posted In: Karnataka, Latest News, Live News
ಬೆಂಗಳೂರು: ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಿ.ಜಿ. ರಾಮಕೃಷ್ಣ ಅವರಿಗೆ ನೀಡಲಾಗಿದ್ದ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಶಿಕ್ಷಣ ಇಲಾಖೆ ತಡೆ ಹಿಡಿದಿದೆ.
ರಾಮಕೃಷ್ಣ ಸೇರಿದಂತೆ ಪದವಿ ಪೂರ್ವ ಕಾಲೇಜುಗಳ ಇಬ್ಬರು ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕರ ಪ್ರಶಸ್ತಿ ನೀಡಲಾಗಿತ್ತು. ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಮಂಗಳವಾರ ರಾತ್ರಿ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಹಿಜಾಬ್ ವಿವಾದದಲ್ಲಿ ರಾಮಕೃಷ್ಣ ಅವರ ಹೆಸರು ಕೇಳಿ ಬಂದಿತ್ತು. ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ರಾಮಕೃಷ್ಣ ಗೇಟ್ ಹೊರಗೆ ನಿಲ್ಲಿಸಿದ್ದರು. ಕಾಲೇಜಿನೊಳಗೆ ಪ್ರವೇಶ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತವಾಗಿತ್ತು.
ಪ್ರಾಂಶುಪಾಲರು ಹಿಜಾಬ್ ಧರಿಸಿ ತರಗತಿಯೊಳಗೆ ಪ್ರವೇಶವಂತಿಲ್ಲ ಎಂಬ ಸರ್ಕಾರದ ಆದೇಶವನ್ನು ಪಾಲಿಸಿದ್ದರು. ಈಗ ಕೆಲವು ಪ್ರಗತಿಪರರ ಒತ್ತಾಯಕ್ಕೆ ಮಣಿದು ಅವರಿಗೆ ನೀಡಲಾಗಿದ್ದ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಯನ್ನು ತಡೆಹಿಡಿಯಲಾಗಿದೆ.