BIG NEWS: ಹಾಲಿನ ದರ ಹೆಚ್ಚಳದ ಬಗ್ಗೆ ಶೀಘ್ರ ತೀರ್ಮಾನ: ಗ್ರಾಹಕರಿಗೆ ಹೊರೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ ಎಂದ ಸಚಿವ ಕೆ.ಎನ್.ರಾಜಣ್ಣ | Kannada Dunia | Kannada News | Karnataka News
14-09-2024 1:42PM IST
/
No Comments /
Posted In: Karnataka, Latest News, Live News
ತುಮಕೂರು: ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ನಿನ್ನೆಯಷ್ಟೇ ಸುಳಿವು ನೀಡಿದ್ದು, ಇದೀಗ ಸಹಕಾರ ಸಚಿವ ಕೆ.ಎನ್.ರಾಜಣ್ಣ ಕೂಡ ಹಾಲಿನ ದರ ಹೆಚ್ಚಳದ ಬಗ್ಗೆ ಶೀಘ್ರವೇ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಜಣ್ಣ, ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುವುದು. ಹೆಚ್ಚಿಸಿದ ದರವನ್ನು ರೈತರಿಗೆ ನೀಡಬೇಕು ಎಂಬ ಉದ್ದೇಶದಿಂದ ದರ ಹೆಚ್ಚಳ ಮಾಡಲಾಗುತ್ತಿದೆ. ರೈತರ ಅನುಕೂಲಕ್ಕಾಗಿ ಈ ತೀರ್ಮಾನ ಎಂದು ಹೇಳಿದರು.
ಹಾಲಿನ ದರ ಹೆಚ್ಚಳವಾದ್ರೆ ಮಾತ್ರ ದೇಶದ ಜಿಡಿಪಿ ಹೆಚ್ಚಾಗುತ್ತದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಲಾಭವಾಗಲ್ಲ. ಕೇಂದ್ರ ಸರ್ಕಾರಕ್ಕೆ ಲಾಭವಾಗಲಿದೆ ಹಾಗೂ ರೈತರಿಗೆ ಅನುಕೂಲವಾಗಲಿದೆ. ಹಾಲಿನ ದರ ಹೆಚ್ಚಳದಿಂದ ಗ್ರಾಹಕರಿಗೆ ಹೊರೆಯಾಗುತ್ತದೆ ಎಂದನ್ನು ಒಪ್ಪಿಕೊಳ್ಳುತ್ತೇವೆ ಎಂದರು.