BREAKING: ಕೋಲಾರ ಈದ್ ಮಿಲಾದ್ ಮೆರವಣಿಗೆಯಲ್ಲಿ ಘರ್ಷಣೆ: ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ | Kannada Dunia | Kannada News | Karnataka News
16-09-2024 8:18PM IST
/
No Comments /
Posted In: Karnataka, Latest News, Live News
ಕೋಲಾರ: ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಘರ್ಷಣೆ ನಡೆದಿದೆ. ಕ್ಲಾರ್ಕ್ ಟವರ್ ಬಳಿ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ.
ಕ್ಷುಲಕ ಕಾರಣಕ್ಕೆ ಸೈಯದ್ ಸಲ್ಮಾನ್, ಸೈಯದ್ ಸೈಫ್, ಹುಸೇನ್ ಕಾಸೀಫ್, ಖಲೀಲ್ ಅಹ್ಮದ್ ಮೇಲೆ ಹಲ್ಲೆ ನಡೆಸಲಾಗಿದ್ದು, ನಾಲ್ವರು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆಯ ನಂತರ ಸ್ಥಳದಲ್ಲಿ ನೂರಾರು ಜನ ಜಮಾಯಿಸಿದ್ದಾರೆ. ಸ್ಥಳಕ್ಕೆ ಕೋಲಾರ ನಗರ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೋಲಾರ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಕೋಲಾರದ ಕ್ಲಾಕ್ ಟವರ್, ಡೂಮ್ ಲೈಟ್ ಸರ್ಕಲ್, ಹೊಸ ಬಸ್ ನಿಲ್ದಾಣ ಸೇರಿದಂತೆ ಹಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಮೆರವಣಿಗೆ ಹಿನ್ನಲೆಯಲ್ಲಿಯಲ್ಲಿ ಪೊಲೀಸರು ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿದ್ದಾರೆ.