ಗ್ಯಾರಂಟಿ ಜಾರಿಯಾದ ಬಳಿಕ ನನ್ನನ್ನು ಮುಗಿಸಲು ಪ್ರಯತ್ನ: ಸಿಎಂ ಸಿದ್ಧರಾಮಯ್ಯ | Kannada Dunia | Kannada News | Karnataka News
16-09-2024 8:51PM IST
/
No Comments /
Posted In: Karnataka, Latest News, Live News
ಕಲಬುರಗಿ: ಗ್ಯಾರಂಟಿ ಯೋಜನೆ ಜಾರಿಯಾದ ನಂತರ ನನ್ನನ್ನು ಮುಗಿಸಲು ಪ್ರಯತ್ನ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಲಬುರ್ಗಿ ತಾಲೂಕಿನ ಕವಲಗಾ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ನನ್ನನ್ನು ಮುಗಿಸಲು ನೀವು ಬಿಡ್ತೀರಾ ಎಂದು ಜನರನ್ನು ಪ್ರಶ್ನಿಸಿದ್ದಾರೆ.
ಯಾವುದೇ ಕಾರಣಕ್ಕೂ ಬಿಡಬೇಡಿ ಎಂದು ಹೇಳಿದ ಸಿಎಂ, ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಬಗ್ಗೆ ಪ್ರತಿಯೊಬ್ಬರು ಎಚ್ಚರವಾಗಿರಬೇಕು. ಬಸವಣ್ಣ, ಸಂಗೊಳ್ಳಿ ರಾಯಣ್ಣನನ್ನೇ ಈ ಹಿತಶತ್ರುಗಳು ಬಿಡಲಿಲ್ಲ. ಮೊದಲು ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಸುಳ್ಳು ಹಬ್ಬಿಸಿದ್ದರು. ಅದು ಆಗದಿದ್ದಾಗ ಸರ್ಕಾರ ದಿವಾಳಿಯಾಗಿದೆ ಎಂದು ಆರೋಪಿಸಿದರು. ನಾನು ಅಧಿಕಾರದಲ್ಲಿ ಇರುವವರೆಗೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಸಿಎಂ ಹೇಳಿದ್ದಾರೆ.