ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News
17-09-2024 10:47AM IST
/
No Comments /
Posted In: Karnataka, Latest News, Live News
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸರ್ಕಾರಿ, ಅನುದಾನ, ಅನುದಾನ ರಹಿತ, ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ಪೂರ್ವ (1ರಿಂದ 10ನೇ ತರಗತಿ) ಮತ್ತು ಮೆಟ್ರಿಕ್ ನಂತರದ ಪಿಯುಸಿ ನಿಂದ ವಿವಿಧ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ವೆಬ್ ಸೈಟ್: https://ssp.postmatric.karnataka.gov.in/ssppre/ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ವೆಬ್ ಸೈಟ್: Account Creation URL:https://ssp.postmatric.karnataka.gov.in/CA/ ವಿದ್ಯಾರ್ಥಿ ವೇತನಕ್ಕೆ State,Scholarship,Portal,URL: https://ssp.postmatric.karnataka.gov.in/ ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು(ಗ್ರೇಡ್-1) ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಪೂರ್ವ ತಾಲ್ಲೂಕು ಅಥವಾ ದೂರವಾಣಿ ಸಂಖ್ಯೆ: 080-29535045 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಪೂರ್ವ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.