ರೈಲ್ವೇ ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಸಚಿವ ಸೋಮಣ್ಣ ಗುಡ್ ನ್ಯೂಸ್: 16 ಸಾವಿರ ಹುದ್ದೆಗಳ ಭರ್ತಿ: ಕನ್ನಡದಲ್ಲೂ ನೇಮಕಾತಿ ಪರೀಕ್ಷೆ | Kannada Dunia | Kannada News | Karnataka News
02-10-2024 8:19PM IST
/
No Comments /
Posted In: Karnataka, Latest News, Live News
ದಾವಣಗೆರೆ: ರೈಲ್ವೇ ಇಲಾಖೆ ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಸಿಹಿ ಸುದ್ದಿ ನೀಡಿದ್ದಾರೆ.
ರೈಲ್ವೇ ಪರೀಕ್ಷೆಯನ್ನು ಕನ್ನಡದಲ್ಲಿಯೂ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕನ್ನಡದಲ್ಲೆ ರೈಲ್ವೆ ಪರೀಕ್ಷೆ ನಡೆಸಲಾಗುವುದು. ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು, 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು, ಮುಂದಿನ ದಿನಗಳಲ್ಲಿ ಖಾಲಿ ಇರುವ 46 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದರು.