11-10-2024 7:10AM IST
/
No Comments /
Posted In: Karnataka, Latest News, Live News
ಬೆಂಗಳೂರು: ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಮೊಹಮ್ಮದ್ ಮೊಹ್ಸಿನ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ವೈದ್ಯಕೀಯ ಶಿಕ್ಷಣ) ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಎನ್. ಮಂಜುಶ್ರೀ ಅವರನ್ನು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ್ ಅವರಿಗೆ ಹೆಚ್ಚುವರಿಯಾಗಿ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆ ಜವಾಬ್ದಾರಿ ನೀಡಲಾಗಿದೆ.