11-10-2024 9:05AM IST
/
No Comments /
Posted In: Karnataka, Latest News, Live News
ವಿಜಯಪುರ: ವಿಜಯಪುರ ಜಿಲ್ಲೆ ಆಲಮೇಲ ತಾಲ್ಲೂಕಿನ ಹೂವಿನಹಳ್ಳಿ ಗ್ರಾಮದ ಭಾಗಮ್ಮ ಗುರುಶಾಂತಗೌಡ ಬಿರಾದಾರ ದಂಪತಿ ಗೃಹಲಕ್ಷ್ಮಿ ಹಣದಿಂದ ದೇವಿಗೆ ಬೆಳ್ಳಿ ಕಿರೀಟ ಮಾಡಿಸಿ ಅರ್ಪಿಸಿದ್ದಾರೆ.
ತಮಗೆ ಬಂದ 12 ತಿಂಗಳ ಗೃಹಲಕ್ಷ್ಮಿ ಹಣದಿಂದ ನವರಾತ್ರಿ ನಿಮಿತ್ತ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ದೇವಿಯ ಮೂರ್ತಿಗೆ 250 ಗ್ರಾಂ ತೂಕದ ಬೆಳ್ಳಿ ಕಿರೀಟ ಮಾಡಿಸಿ ಅರ್ಪಿಸಿದ್ದಾರೆ. ಅವರನ್ನು ಶಾಸಕ ಅಶೋಕ ಮನಗೂಳಿ ಸನ್ಮಾನಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ಕೊಟ್ಟ ಮಾತು ಉಳಿಸಿಕೊಂಡಿದೆ ಎಂದರು.
ಪಂಚ ಗ್ಯಾರಂಟಿ ಯೋಜನೆಯ ಲಾಭವನ್ನು ರಾಜ್ಯದ 1.60 ಕೋಟಿ ಫಲಾನುಭವಿಗಳು ಪಡೆದುಕೊಂಡಿದ್ದಾರೆ. ಭಾಗಮ್ಮ ದಂಪತಿ ಗೃಹಲಕ್ಷ್ಮಿ ಹಣದಿಂದ ದೇವಿಗೆ ಕಿರೀಟ ಮಾಡಿಸಿಕೊಟ್ಟಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.