ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ, ಉಪ ಚುನಾವಣೆಯಲ್ಲಿ ಅಭ್ಯರ್ಥಿಯಾಗುವ ಬಗ್ಗೆ ರಾಮಲಿಂಗಾರೆಡ್ಡಿ ಮಹತ್ವದ ಹೇಳಿಕೆ | Kannada Dunia | Kannada News | Karnataka News
21-10-2024 8:50PM IST
/
No Comments /
Posted In: Karnataka, Latest News, Live News
ಬೆಂಗಳೂರು: ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ನಿರ್ಧಾರವೇ ಅಂತಿಮ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ ನೀಡಿದ ವಿಚಾರದ ಬಗ್ಗೆ ಮಾತನಾಡಿ, ಯೋಗೇಶ್ವರ್ ಬಿಜೆಪಿಯಲ್ಲಿದ್ದು, ವಿಧಾನ ಪರಿಷತ್ ಸದಸ್ಯರು ಆಗಿದ್ದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಟಿಕೆಟ್ ಬೇಕೆಂದು ಕೇಳುತ್ತಿದ್ದಾರೆ. ಜೆಡಿಎಸ್ ನವರು ಚನ್ನಪಟ್ಟಣ ನಮ್ಮ ಸೀಟ್ ಎಂದು ಹೇಳುತ್ತಿದ್ದಾರೆ. ಹೀಗಾಗಿ ಯೋಗೇಶ್ವರ್ ಗೆ ಅಳಿವು ಉಳಿವಿನ ಪ್ರಶ್ನೆಯಾಗಿದೆ ಎಂದರು.
ಚನ್ನಪಟ್ಟಣದಲ್ಲಿ ನಮ್ಮಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಅವರಲ್ಲಿ ಇಲ್ಲ/ ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಪುತ್ರನಿಗೆ ಟಿಕೆಟ್ ಕೊಟ್ಟಿದ್ದಾರೆ ಪ್ರಧಾನಿ ಮೋದಿ ಕುಟುಂಬ ರಾಜಕಾರಣ ವೆಂದು ಟೀಕಿಸುತ್ತಾರೆ. ಕುಟುಂಬ ರಾಜಕಾರಣ ಮಾಡುತ್ತಿರುವುದೇ ಬಿಜೆಪಿ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.