ಆಟೋ -ಟ್ರಕ್ ಡಿಕ್ಕಿಯಾಗಿ ಅಪಘಾತದಲ್ಲಿ ಮೃತಪಟ್ಟ 10 ಮಂದಿ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ | Kannada Dunia | Kannada News | Karnataka News
06-11-2024 7:57PM IST
/
No Comments /
Posted In: Latest News, India, Live News
ನವದೆಹಲಿ: ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಆಟೋ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ 6 ಮಹಿಳೆಯರು ಸೇರಿದಂತೆ 10 ಜನರು ಸಾವನ್ನಪ್ಪಿದ್ದಾರೆ.
4 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ, ಅವರನ್ನು ಉತ್ತಮ ಚಿಕಿತ್ಸೆಗಾಗಿ ಆಸ್ಪತ್ರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹರ್ದೋಯಿ ಪೊಲೀಸ್ ವರಿಷ್ಠಾಧಿಕಾರಿ ನೀರಜ್ ಕುಮಾರ್ ಜದೌನ್ ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೃತರ ಕುಟುಂಬದವರಿಗೆ ಮತ್ತು ಗಾಯಾಳುಗಳಿಗೆ ಪರಿಹಾರ ಘೋಷಿಸಿದ್ದಾರೆ. ದುರ್ಘಟನೆಯಲ್ಲಿ ಮೃತಪಟ್ಟ ಪ್ರತಿಯೊಬ್ಬರ ಮುಂದಿನ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು.
Prime Minister Narendra Modi has announced an ex-gratia of Rs. 2 lakh from PMNRF for the next of kin of each deceased in the mishap in Hardoi, Uttar Pradesh. The injured would be given Rs. 50,000. https://t.co/bD6Q6E7eXc pic.twitter.com/pan7O28Ss3
— ANI (@ANI) November 6, 2024