Ultimate magazine theme for WordPress.

ಮೈಸೂರಿನಲ್ಲಿ ಕೊರೊನಾ ವೈರಸ್; ಇದುವರೆಗಿನ ಪ್ರಕರಣಗಳೆಷ್ಟು?

0

ಮೈಸೂರು, ಏಪ್ರಿಲ್ 02: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. ಇದೀಗ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿರುವುದು ಇಲ್ಲಿನವರನ್ನು ಕಂಗಾಲು ಮಾಡಿದೆ.

ನಂಜನಗೂಡು ತಾಲೂಕಿನ ಜ್ಯುಬಿಲಿಯಂಟ್ ಔಷಧ ತಯಾರಿಕಾ ಕಂಪನಿಯ ಗುಣಮಟ್ಟ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆ ವ್ಯಕ್ತಿ ಸಂಪರ್ಕದಿಂದ ಜಿಲ್ಲೆಯಲ್ಲಿ ಈವರೆಗೆ 16 ಜನರಿಗೆ ಸೋಂಕು ತಗುಲಿರುವುದಲ್ಲದೆ, ಆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದವರಿಗೂ ಸೋಂಕು ತಗುಲಿದೆ.

ಇದಲ್ಲದೇ ಬುಧವಾರ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿರುವ ಮೂವರನ್ನು ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ‌ನಲ್ಲಿ ತಿಳಿಸಿದೆ. ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಆತಂಕವೂ ಉಂಟಾಗಿದೆ. ಒಟ್ಟು ಜಿಲ್ಲೆಯಲ್ಲಿ 19 ಪ್ರಕರಣಗಳು ದಾಖಲಾಗಿವೆ.

ಜಿಲ್ಲೆಯಲ್ಲಿ ಈವರೆಗೆ 2619 ಜನರ ಮೇಲೆ ನಿಗಾ ವಹಿಸಲಾಗಿದೆ. 1635 ಮಂದಿ 14 ದಿನಗಳ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಸೋಂಕು ದೃಢಪಟ್ಟಿರುವ 17 ಜನರನ್ನು ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. 967 ಮಂದಿ 14 ದಿನಗಳ ಹೋಮ್ ಕ್ವಾರಂಟೈನ್ ಮುಗಿಸಿದ್ದಾರೆ. 130 ಜನರ ಮಾದರಿ ಪರೀಕ್ಷೆಯಲ್ಲಿ 123 ಜನರ ಸ್ಯಾಂಪಲ್ ನೆಗೆಟಿವ್ ಬಂದಿದೆ.

Leave A Reply

Your email address will not be published.