Ultimate magazine theme for WordPress.

ಮಂಡ್ಯ: ಕ್ವಾರೆಂಟೈನ್ ಕೇಂದ್ರದಿಂದ ಮನೆಗೆ ಕೊರೊನಾ ವೈರಸ್ ಸೋಂಕಿತ!

0

ಮಂಡ್ಯ, ಜೂನ್.07: ಕೊರೊನಾ ವೈರಸ್ ಸೋಂಕಿತ ಬಗ್ಗೆ ಜಿಲ್ಲಾಡಳಿತವು ತೋರಿದ ನಿರ್ಲಕ್ಷ್ಯ ಇಡೀ ಗ್ರಾಮವನ್ನೇ ಆತಂಕಕ್ಕೆ ದೂಡಿದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹನುಗನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆಯಷ್ಟೇ ಕ್ವಾರೆಂಟೈನ್ ಕೇಂದ್ರದಿಂದ ಬಿಡುಗಡೆಯಾದ 27 ವರ್ಷದ ಯುವಕನಿಗೆ ಕೊರೊನಾ ವೈರಸ್ ಸೋಂಕು ತಗಲಿದೆ. ಶನಿವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಈ ಅಂಶ ದೃಢಪಟ್ಟಿದೆ.

ಕಳೆದ ತಿಂಗಳು ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿದ 27 ವರ್ಷದ ಯುವಕನನ್ನು ಮಂಡ್ಯ ಜಿಲ್ಲೆಯ ಕ್ವಾರೆಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಮೊದಲ ಬಾರಿ ವೈದ್ಯಕೀಯ ತಪಾಸಣೆ ನಡೆಸಿದಾಗ ಯುವಕನಲ್ಲಿ ಯಾವುದೇ ಸೋಂಕು ಕಾಣಿಸಿಕೊಂಡಿರಲಿಲ್ಲ.

ಕಳೆದ ತಿಂಗಳು ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿದ 27 ವರ್ಷದ ಯುವಕನನ್ನು ಮಂಡ್ಯ ಜಿಲ್ಲೆಯ ಕ್ವಾರೆಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಮೊದಲ ಬಾರಿ ವೈದ್ಯಕೀಯ ತಪಾಸಣೆ ನಡೆಸಿದಾಗ ಯುವಕನಲ್ಲಿ ಯಾವುದೇ ಸೋಂಕು ಕಾಣಿಸಿಕೊಂಡಿರಲಿಲ್ಲ.

Leave A Reply

Your email address will not be published.