ಆರೋಗ್ಯ ಸರಿಪಡಿಸುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದ ತಾಂತ್ರಿಕ, ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಕಿ – Kannada News | Rajasthan Crime: minor girl gives birth after being raped by tantrik on pretext of treatment
ಆರೋಗ್ಯ ಸರಿಪಡಿಸುತ್ತೇನೆ ಎಂದು ನಂಬಿಸಿ ತಾಂತ್ರಿಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರವೆಸಿಗಿದ್ದು, ಇದೀಗ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ಆರೋಗ್ಯ ಸರಿಪಡಿಸುತ್ತೇನೆ ಎಂದು ನಂಬಿಸಿ ತಾಂತ್ರಿಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರವೆಸಿಗಿದ್ದು, ಇದೀಗ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ರಾಜಸ್ಥಾನದ ಸಾಲುಂಬರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅನಾರೋಗ್ಯಕ್ಕೆ ತುತ್ತಾಗಿದ್ದ ಬಾಲಕಿಗೆ ಚಿಕಿತ್ಸೆ ಕೊಡಿಸುವ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಜೂನ್ 6 ರಂದು ಸಂತ್ರಸ್ತೆ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಬಾಲಕಿ ಅಪ್ರಾಪ್ತೆ ಎನ್ನುವ ವಿಷಯ ತಿಳಿದ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡರು. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ.
ಒಂದು ತಿಂಗಳ ನಂತರ, ಜುಲೈ 6 ರಂದು, ಅಪ್ರಾಪ್ತ ವಯಸ್ಕಳನ್ನು ಆಸ್ಪತ್ರೆಯ ಆವರಣದಲ್ಲಿ ಅತ್ಯಾಚಾರವೆಸಗಲಾಗಿದೆ ಎಂದು ಆರೋಪಿಸಿ ಕುಟುಂಬದ ಸದಸ್ಯರು ಪೊಲೀಸರನ್ನು ಸಂಪರ್ಕಿಸಿ ಪ್ರಕರಣ ದಾಖಲಿಸಿದರು. ಆಸ್ಪತ್ರೆಯ ಪಾರ್ಕಿಂಗ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ತಾಂತ್ರಿಕ ಮತ್ತು ಇತರ ಇಬ್ಬರನ್ನು ಪೊಲೀಸರು ಬಂಧಿಸಿದರು. ಅಪ್ರಾಪ್ತ ವಯಸ್ಕನನ್ನು ಸಹ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಮತ್ತಷ್ಟು ಓದಿ: ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್
ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ಮಗುವಿನ ಡಿಎನ್ಎ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪ್ರದೀಪ್ ಹೇಳಿದರು, ಒಂದು ತಿಂಗಳ ನಂತರ ವರದಿ ಲಭ್ಯವಾಗುತ್ತದೆ, ಆಗ ನಿಜವಾದ ತಂದೆ ಯಾರು ಎಂದು ಸ್ಪಷ್ಟವಾಗುತ್ತದೆ.
ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ, ತಂದೆ ಸಾಲುಂಬರ್ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ಅವರ ಅಪ್ರಾಪ್ತ ಮಗಳು ಅನಾರೋಗ್ಯಕ್ಕೆ ಒಳಗಾದಾಗ, ತಂತ್ರಿ ಅವಳನ್ನು ತನ್ನ ಬಳಿಗೆ ಕರೆತರುವಂತೆ ಕೇಳಿಕೊಂಡಿದ್ದ, ತಾನು ತಾಂತ್ರಿಕ ತನ್ನ ನಿಗೂಢ ಶಕ್ತಿಯಿಂದ ಆಕೆಯ ಆರೋಗ್ಯವನ್ನು ಸರಿಪಡಿಸುವುದಾಗಿ ನಂಬಿಸಿ, ಆಕೆಯನ್ನು ಕರೆದೊಯ್ದು ಅತ್ಯಾಚಾರವೆಸಗಿದ್ದ. ಚಿಕಿತ್ಸೆಯ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ತಂತ್ರಿ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ.
Published On – 12:37 pm, Tue, 8 August 23