ಬೆಳಗಾವಿ: ರಾಯಬಾಗ ಬಸ್ ನಿಲ್ದಾಣದ ಕಟ್ಟಡದಲ್ಲೇ ಡಿಪೋ ಕಂಟ್ರೋಲರ್ ಆತ್ಮಹತ್ಯೆ, ಕಾರಣ? – Kannada News | Depot controller committed suicide in Raibag bus station building
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ(Devanahalli) ಪಟ್ಟಣದ ಬಿಎಂಟಿಸಿ(BMTC) ಡಿಪೋದಲ್ಲಿ ಚಾಲಕ ಕಂ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದ ನಾಗೇಶ್ (45) ಎಂಬುವವರು ನಿನ್ನೆ(ಆ.8) ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಬೆಳಗಾವಿ ಜಿಲ್ಲೆಯ ರಾಯಬಾಗ ಬಸ್ ನಿಲ್ದಾಣದಲ್ಲಿ ಡಿಪೋ ಕಂಟ್ರೋಲರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಾನಂದ ಭಜಂತ್ರಿ (48) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಯಬಾಗ ಬಸ್ ನಿಲ್ದಾಣದಲ್ಲಿ ಡಿಪೋ ಕಂಟ್ರೋಲರ್ ನೇಣಿಗೆ ಶರಣು
ಬೆಳಗಾವಿ, ಆ.9: ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಕೆಎಸ್ಆರ್ಟಿಸಿ (KSRTC) ಚಾಲಕ ಜಗದೀಶ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದರು. ಅದರಂತೆ ನಿನ್ನೆ(ಆ.8) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ(Devanahalli) ಪಟ್ಟಣದ ಬಿಎಂಟಿಸಿ(BMTC) ಡಿಪೋದಲ್ಲಿ ಚಾಲಕ ಕಂ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದ ನಾಗೇಶ್ (45) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಬೆಳಗಾವಿ(Belagavi) ಜಿಲ್ಲೆಯ ರಾಯಬಾಗ(Raybag) ಬಸ್ ನಿಲ್ದಾಣದಲ್ಲಿ ಡಿಪೋ ಕಂಟ್ರೋಲರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಾನಂದ ಭಜಂತ್ರಿ (48) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ
ಶಿವಾನಂದ ಅವರು ಡಿಪೋ ಕಂಟ್ರೋಲರ್ ಆಗಿ ಕೆಲಸ ಮಾಡುತ್ತಿದ್ದು, ರಾಯಬಾಗ ಬಸ್ ನಿಲ್ದಾಣದ ಕಟ್ಟಡದ ಮೊದಲ ಮಹಡಿಯಲ್ಲಿಯೇ ಕಿಟಕಿಗೆ ಹಗ್ಗ ಕಟ್ಟಿ ನೇಣಿಗೆ ಶರಣಾಗಿದ್ದಾರೆ. ಇಂದು ಬೆಳಗ್ಗೆ ಎಂದಿನಂತೆ ಸಿಬ್ಬಂದಿ ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ರಾಯಬಾಗ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಮಾಡುತ್ತಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಯಚೂರಿನಲ್ಲಿ ಅಪರಿಚಿತ ಮಹಿಳೆ ಕೊಲೆ
ರಾಯಚೂರು: ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಜವಳಗೇರಾ ಗ್ರಾಮದ ಬಳಿಯ ಹೊಲವೊಂದರಲ್ಲಿ ಸುಮಾರು 30ರಿಂದ35 ವಯಸ್ಸಿನ ಮಹಿಳೆಯ ಶವ ಪತ್ತೆಯಾಗಿದೆ. ಮೃತಳ ಕೈ ಮೇಲೆ ತಿರುಪತಮ್ಮ ಎಂದು ಹಚ್ಚೆ ಹಾಕಿಸಿಕೊಂಡಿದ್ದು, ಬೇರೆಡೆ ಕೊಲೆ ಮಾಡಿ ಜವಳಗೇರಾ ಬಳಿ ಮೃತದೇಹ ಬೀಸಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಪೊಲೀಸರು ಮೃತಳ ಗುರುತು ಪತ್ತೆ ಕಾರ್ಯದಲ್ಲಿ ತೊಡಗಿದ್ದು, ಬಳಗಾನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.