EBM News Kannada
Leading News Portal in Kannada

ಆರೋಗ್ಯ ಸರಿ ಇಲ್ಲ ಎಂದು ರಜೆ ಪಡೆದು, ಪಬ್​ಗೆ ಹೋಗಿ ಕಂಠಪೂರ್ತಿ ಕುಡಿದು, ಪೊಲೀಸ್ ಅಧಿಕಾರಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ – Kannada News | Goa Crime: Police On sick leave, and drunk, molests woman at pub, probe ordered

0


ಆರೋಗ್ಯ ಸರಿ ಇಲ್ಲ ಎಂದು ರಜೆ ಪಡೆದು, ಪಬ್​ಗೆ ಹೋಗಿ ಕಂಠಪೂರ್ತಿ ಕುಡಿದು, ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಗೋವಾದಲ್ಲಿ ನಡೆದಿದೆ

ಪಬ್

Image Credit source: Zomato

ಆರೋಗ್ಯ ಸರಿ ಇಲ್ಲ ಎಂದು ರಜೆ ಪಡೆದು, ಪಬ್​ಗೆ ಹೋಗಿ ಕಂಠಪೂರ್ತಿ ಕುಡಿದು, ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಗೋವಾದಲ್ಲಿ ನಡೆದಿದೆ. ಬಾಗಾ ಪಟ್ಟಣದ ಪಬ್​ನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಕುಡಿದ ಅಮಲಿನಲ್ಲಿ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. ಎ ಕೋನ್ ಎಂದು ಗುರುತಿಸಲ್ಪಟ್ಟ ಡಿಐಜಿ ಈ ಹಿಂದೆ ದೆಹಲಿ ಪೊಲೀಸ್ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿದ್ದರು. ಸೋಮವಾರ ರಾತ್ರಿ ಈ ಘಟನೆ ನಡೆದಿದೆ.

ಮೂಲಗಳ ಪ್ರಕಾರ, ಘಟನೆಯ ಸಮಯದಲ್ಲಿ ಕೋನ್ ಮದ್ಯದ ಅಮಲಿನಲ್ಲಿದ್ದರು. ಅವರು ರಾಜ್ಯದ ಪ್ರಮುಖ ರಾಜಕಾರಣಿಯೊಂದಿಗೆ ಸಂಬಂಧ ಹೊಂದಿದ್ದ ಕ್ಲಬ್‌ನಲ್ಲಿ ಮಹಿಳೆಯೊಂದಿಗೆ ಜಗಳವಾಡಿದರು ಮತ್ತು ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ವರದಿಯಾಗಿದೆ.

ಘಟನೆಯ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಡಿಐಜಿ ಮತ್ತು ಮಹಿಳೆ ಜತೆ ಮಾತಿನ ಚಕಮಕಿಯಲ್ಲಿ ತೊಡಗಿರುವುದನ್ನು ಕಾಣಬಹುದು. ಮಹಿಳೆ ಪೊಲೀಸರಿಗೆ ಕಪಾಳಮೋಕ್ಷ ಮಾಡಿದ ಬಳಿಕ ಗಲಾಟೆ ನಡೆದಿದೆ. ಪ್ರಕರಣದ ತನಿಖೆಯಿಂದ ಡಿಐಜಿ ಅವರು ಘಟನೆಯ ಸಮಯದಲ್ಲಿ ವೈದ್ಯಕೀಯ ರಜೆಯಲ್ಲಿದ್ದರು ಎಂದು ತಿಳಿದುಬಂದಿದೆ.

ಮತ್ತಷ್ಟು ಓದಿ: ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ: ಎಫ್‌ಐಆರ್​ ದಾಖಲು

ಘಟನೆಯನ್ನು ಗಮನಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಗೋವಾ ವಿಧಾನಸಭೆಯಲ್ಲೂ ಈ ವಿಷಯವನ್ನು ಕೈಗೆತ್ತಿಕೊಂಡಿದ್ದು, ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕೆಂಬ ಬೇಡಿಕೆಯನ್ನು ಇಡಲಾಗಿದೆ.

ತಾಜಾ ಸುದ್ದಿ

Leave A Reply

Your email address will not be published.