ತಿರುವನಂತಪುರಂ: ನಟಿಯೊಬ್ಬರ ದೂರಿನ ಹಿನ್ನೆಲೆಯಲ್ಲಿ ನಟ ಜಯಸೂರ್ಯ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.
“ನಟ ಜಯಸೂರ್ಯ ವಿರುದ್ಧ 354, 354ಎ(ಎ1)(ಐ) 354ಡಿ ಐಪಿಸಿ ಅಡಿಯಲ್ಲಿ ಎರಡನೇ ಎಫ್‌ಐಆರ್ ದಾಖಲಿಸಲಾಗಿದೆ. ದೂರುದಾರರ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಪ್ರಕರಣ ದಾಖಲಿಸಲಾಗಿದೆ. ತಿರುವನಂತಪುರದಲ್ಲಿ ಎಫ್‌ಐಆರ್ ದಾಖಲಾಗಿದ್ದು, ತೋಡುಪುಳ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುವುದು.” ಎಂದು ಕೇರಳ ಪೊಲೀಸರು ಎಎನ್‌ಐ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ.
ಹೇಮಾ ಸಮಿತಿಯ ವರದಿ ಹೊರಬಿದ್ದ ಬಳಿಕ ಮಲಯಾಳಂ ಚಿತ್ರರಂಗದ ಕೆಲವು ನಟಿಯರು, ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು.