ತಿರುವನಂತಪುರಂ: ತಮ್ಮ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಕಿರುಕುಳ ಆರೋಪಗಳನ್ನು ಅಲ್ಲಗಳೆದಿರುವ ಮಲಯಾಳಂ ನಟ ಜಯಸೂರ್ಯ, ಈ ಸುಳ್ಳು ಆರೋಪಗಳಿಂದ ನನಗೆ ಮತ್ತು ನನ್ನ ಕುಟುಂಬಕ್ಕೆ ತೀವ್ರ ಘಾಸಿಯಾಗಿದೆ ಎಂದು ಖೇದ ವ್ಯಕ್ತಪಡಿಸಿದ್ದಾರೆ. ತಮ್ಮ ಕುಟುಂಬದ ಸದಸ್ಯರೊಂದಿಗೆ ಸದ್ಯ ಅಮೆರಿಕಾ ಪ್ರವಾಸದಲ್ಲಿರುವ ಅವರು, ತಮ್ಮ 46ನೇ ಜನ್ಮದಿನದಂದು ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿರುವ ಅವರು, ಈ ಕುರಿತು ಕಾನೂನು ಕ್ರಮ ಕೈಗೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಅಮೆರಿಕಾದಲ್ಲಿನ ತಮ್ಮ ವೈಯಕ್ತಿಕ ಕಾರ್ಯಗಳನ್ನು ಮುಕ್ತಾಯಗೊಳಿಸುತ್ತಿರುವ ಜಯಸೂರ್ಯ, ಶೀಘ್ರವೇ ಕಾನೂನು ಕ್ರಮಗಳನ್ನು ಎದುರುಗೊಳ್ಳಲು ಕೇರಳಕ್ಕೆ ಮರಳುವ ಭರವಸೆ ನೀಡಿದ್ದಾರೆ. ಅಲ್ಲದೆ, ನ್ಯಾಯಾಂಗ ವ್ಯವಸ್ಥೆಯ ಪರ ತಮ್ಮ ವಿಶ್ವಾಸವನ್ನು ವ್ಯಕ್ತಪಡಿಸಿರುವ ಅವರು, “ನಾನು ಸತ್ಯ ಗೆಲುವು ಸಾಧಿಸುತ್ತದೆ” ಎಂದು ನಂಬಿದ್ದೇನೆ ಎಂದು ಹೇಳಿದ್ದಾರೆ.
ನಟ ಜಯಸೂರ್ಯರ ಹೆಸರು ಎರಡು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ.