ಬೆಂಗಳೂರು: ಮಲಯಾಳಂ ಸಿನೆಮಾ ರಂಗದ ಕುರಿತು ಕೇರಳ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶೆ ಕೆ.ಹೇಮಾ ನೇತೃತ್ವದ ಸಮಿತಿಯ ವರದಿಯು ಆ.19ರಂದು ಬಹಿರಂಗಗೊಂಡಿದೆ. ಇದರ ಬೆನ್ನಿಗೇ ಚಿತ್ರರಂಗದಲ್ಲಿ ಕಲಾವಿದೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿ ಬಂದಿತ್ತು. ಈ ನಡುವೆ ಕರ್ನಾಟಕದಲ್ಲಿಯೂ ಇಂತಹ ಸಮಿತಿಯೊಂದನ್ನು ರಚಿಸಬೇಕು ಎಂದು ಕನ್ನಡ ಚಿತ್ರರಂಗದ ಕಲಾವಿದರು ಒತ್ತಾಯಿಸಿದ್ದಾರೆ.
ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಸಮಸ್ಯೆಗಳನ್ನು ಅಧ್ಯಯನ ಮಾಡಿ ವರದಿ ಮಾಡಲು ಸಮಿತಿಯನ್ನು ರಚಿಸುವಂತೆ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (ಫೈರ್) ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ.