EBM News Kannada
Leading News Portal in Kannada

ಅತ್ಯಾಚಾರ ಪ್ರಕರಣ: ಮಲಯಾಳಂ ನಟ ಸಿದ್ದೀಕ್ ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಸುಪ್ರೀಂಕೋರ್ಟ್

0


ಹೊಸದಿಲ್ಲಿ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಲಯಾಳಂ ನಟ ಸಿದ್ದೀಕ್ ಗೆ ಬಂಧನದಿಂದ ಸುಪ್ರೀಂಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ.

ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿದ್ದಿಕ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು, ಎರಡು ವಾರಗಳ ಕಾಲ ನಟನನ್ನು ಬಂಧಿಸದಂತೆ ತನಿಖಾ ತಂಡಕ್ಕೆ ನಿರ್ಬಂಧ ವಿಧಿಸಿದೆ ಮತ್ತು ಕೇರಳ ಸರ್ಕಾರ ಮತ್ತು ಪ್ರಕರಣದ ಸಂತ್ರಸ್ತರಿಗೆ ನೋಟಿಸ್ ಜಾರಿ ಮಾಡಿದೆ.

ಸಿದ್ದಿಕ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ಎಂಟು ವರ್ಷಗಳ ನಂತರ 2024ರಲ್ಲಿ ದೂರು ದಾಖಲಿಸಿರುವುದನ್ನು ಕೋರ್ಟ್ ಗಮನಕ್ಕೆ ತಂದಿದ್ದಾರೆ.

ಇದೇ ವೇಳೆ, ನಟನ ವಿರುದ್ಧ ದೂರು ದಾಖಲಿಸಲು ವಿಳಂಬಕ್ಕೆ ಕಾರಣವೇನು ಎಂದು ಸಂತ್ರಸ್ತೆಯ ಪರ ವಾದ ಮಂಡಿಸಿದ ವಕೀಲೆ ವೃಂದಾ ಗ್ರೋವರ್ ಗೆ ಸುಪ್ರೀಂಕೋರ್ಟ್ ಗೆ ಪ್ರಶ್ನಿಸಿದೆ.

ಸೆ. 24 ರಂದು, ಅತ್ಯಾಚಾರ ಪ್ರಕರಣದಲ್ಲಿ ಸಿದ್ದೀಕ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಸಿದ್ದೀಕ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿತ್ತು.

Leave A Reply

Your email address will not be published.