ತಿರುವನಂತಪುರಂ: ಕಾರು ಬೈಕ್‌ಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಶ್ರೀನಾಥ್ ಭಾಸಿಯವರನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.
ಕಳೆದ ತಿಂಗಳು ಸೆಪ್ಟೆಂಬರ್‌ನಲ್ಲಿ ಸಂಭವಿಸಿದ ಅಪಘಾತ ಸಂಭವಿಸಿದ ನಂತದ ನಟನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು ಎಂದು ಎರ್ನಾಕುಲಂ ಸೆಂಟ್ರಲ್ ಪೊಲೀಸರು ತಿಳಿಸಿದ್ದಾರೆ. ನಂತರ ಸ್ಟೇಷನ್ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಕಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಾಯಗಳಾಗಿತ್ತು.
ಭಾಸಿ ಅವರು ಸೋಮವಾರ ಪೊಲೀಸರ ಮುಂದೆ ಹಾಜರಾದಾಗ, ಅವರನ್ನು ಬಂಧಿಸಲಾಗಿದೆ. ಬಳಿಕ ಅವರನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.