ಬೆಂಗಳೂರು, ಅ.20: ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಏಳು ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಸರೋಜಾರ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ ಅವರ ಜೆ.ಪಿ. ನಗರ ನಿವಾಸಕ್ಕೆ ತರಲಾಗುವುದು. ಅಲ್ಲಿ ಅಂತಿಮ ದರ್ಶನಕ್ಕೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.