ಬೆಂಗಳೂರು: ಹಿರಿಯ ಕಲಾವಿದ, ಹಾಸ್ಯ ನಟ ಬ್ಯಾಂಕ್ ಜನಾರ್ದನ್ (76) ರವಿವಾರ ತಡರಾತ್ರಿ 2.30ರ ಸುಮಾರಿಗೆ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
500 ಕ್ಕೂ ಹೆಚ್ಚು ಕನ್ನಡ ಸಿನೆಮಾಗಳಲ್ಲಿ ನಟಿಸಿರುವ ಅವರಿಗೆ ಕೆಲ ತಿಂಗಳ ಹಿಂದೆ ಹೃದಯಾಘಾತವಾಗಿತ್ತು.
ಸುಲ್ತಾನ್ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಬ್ಯಾಂಕ್ ಜನಾರ್ದನ್ ಕನ್ನಡ ಸಿನೆಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಹಾಸ್ಯ ನಟರಾಗಿ ಸಾಕಷ್ಟು ಪಾತ್ರಗಳನ್ನು ಅವರು ನಿರ್ವಹಿಸಿದ್ದಾರೆ.