EBM News Kannada
Leading News Portal in Kannada

ಮೋಹನ್ ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

0



ಹೊಸದಿಲ್ಲಿ: 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಹೊಸದಿಲ್ಲಿಯಲ್ಲಿ ನಡೆದಿದ್ದು ಖ್ಯಾತ ಮಲಯಾಳಂ ನಟ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮೋಹನ್ ಲಾಲ್, “ಈ ಕ್ಷಣ ಕೇವಲ ನನ್ನದು ಮಾತ್ರವಲ್ಲ, ಇದು ಇಡೀ ಮಲಯಾಳಂ ಚಿತ್ರೋದ್ಯಮಕ್ಕೆ ಸೇರಿದ್ದು. ನಮ್ಮ ಚಿತ್ರೋದ್ಯಮದ ಮತ್ತು ನಮ್ಮ ಅಭಿಮಾನಿಗಳ ಪರವಾಗಿ ನಾನಿಂದು ಈ ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದೇನೆ ಎಂದು ಹೇಳಿದರು.

ಇದೇ ವೇಳೆ ‘ಜವಾನ್‌’ ಚಿತ್ರಕ್ಕಾಗಿ ಶಾರುಕ್‌ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದರು. ಶಾರುಕ್‌ ಖಾನ್‌ ತಮ್ಮ 30 ವರ್ಷಗಳ ಸಿನಿಪಯಣದಲ್ಲಿ ಮೊದಲ ರಾಷ್ಟ್ರ ಪ್ರಶಸ್ತಿ ಪಡೆದರು.

ಶಾರುಕ್‌ ಖಾನ್‌ ಜೊತೆ ವಿಕ್ರಾಂತ್ ಮ್ಯಾಸಿ ಕೂಡಾ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದರು. ಶ್ರೀಮತಿ ಚಟರ್ಜಿ vs ನಾರ್ವೆ ಚಿತ್ರದಲ್ಲಿನ ಅಭಿನಯಕ್ಕಾಗಿ ನಟಿ ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ ಸ್ವೀಕರಿಸಿದರು.

Leave A Reply

Your email address will not be published.