EBM News Kannada
Leading News Portal in Kannada

ಕಳೆದ ಮೂರು ವರ್ಷ ರಾಜನಂತೆ ಮೆರೆದ ವಿರಾಟ್ ಕೊಹ್ಲಿಗೆ ಶಾಕ್ ಕೊಟ್ಟ ಸ್ಟೋಕ್

0

ಮಹಿಳಾ ಕ್ರಿಕೆಟಿಗರ ವಿಭಾಗದಲ್ಲಿ ಈ ಪ್ರಶಸ್ತಿಯನ್ನು ಆಸ್ಟ್ರೇಲಿಯದ ಆಲ್ರೌಂಡರ್ ಎಲಿಸೆ ಪೆರ್ರಿ ವಿಸ್ಡನ್ ವರ್ಷದ ಶ್ರೇಷ್ಠ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಕಳೆದ ವರ್ಷ ಈ ಪ್ರಶಸ್ತಿಯನ್ನು ಭಾರತದ ಸ್ಮತಿ ಮಂದಾನಾ ಪಡೆದಿದ್ದರು. ಇಂಗ್ಲೆಂಡ್ ಕ್ರಿಕೆಟ್ ತಂಡ ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ 2019ರ ವಿಸ್ಡನ್ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈ ಮೂಲಕ 2016, 2017 ಮತ್ತು 2018 ಹೀಗೆ ಸತತ ಮೂರು ವರ್ಷ ವಿಸ್ಡನ್ ಲೀಡಿಂಗ್ ಕ್ರಿಕೆಟರ್ ಆಫ್ ದಿ ಇಯರ್ ಪ್ರಶಸ್ತಿ ಪಡೆದುಕೊಂಡಿದ್ದ ಕೊಹ್ಲಿ ಓಟಕ್ಕೆ ಇಂಗ್ಲೀಷ್ ಕ್ರಿಕೆಟಿಗ ಬ್ರೇಕ್ ಹಾಕಿದ್ದಾರೆ. 2005ರಲ್ಲಿ ಆ್ಯಂಡ್ರೂ ಫ್ಲಿಂಟಾಫ್ ನಂತರ ಈ ಪ್ರಶಸ್ತಿಗೆ ಭಾಜನರಾದ ಇಂಗ್ಲೆಂಡ್ ಆಟಗಾರ ಎಂಬ ಹೆಗ್ಗಳಿಕೆಗೂ ಬೆನ್ ಸ್ಟೋಕ್ಸ್ ಪಾತ್ರರಾಗಿದ್ದಾರೆ.
ಬೆನ್ ಸ್ಟೋಕ್ಸ್ ಅವರ ಅಮೋಘ ಸಾಧನೆಯಿಂದಾಗ ಇಂಗ್ಲೆಂಡ್ ತಂಡ ಕಳೆದ ವರ್ಷ ಚೊಚ್ಚಲ ಬಾರಿ ಐಸಿಸಿ ಏಕದಿನ ವಿಶ್ವಕಪ್ ಪ್ರಶಸ್ತಿ ಜಯಿಸಿತ್ತು.

ಲಾರ್ಡ್ಸ್​​ನಲ್ಲಿ ನಡೆದ ನ್ಯೂಜಿಲ್ಯಾಂಡ್ ವಿರುದ್ಧದ ಫೈನಲ್ನಲ್ಲಿ ಸ್ಟೋಕ್ಸ್ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಜಿಕೊಂಡಿದ್ದರು. ಅಲ್ಲದೆ ಆಸ್ಟ್ರೇಲಿಯ ವಿರುದ್ಧ ನಡೆದ ಆ್ಯಶಸ್ ಸರಣಿಯ ಮೂರನೇ ಪಂದ್ಯದಲ್ಲಿ ಅಜೇಯ 135 ರನ್ ಸಿಡಿಸಿ ಪಂದ್ಯ ಗೆಲ್ಲಲು ಕಾರಣರಾಗಿದ್ದರು.

Leave A Reply

Your email address will not be published.