Ultimate magazine theme for WordPress.

ಉಳ್ಳವರ ಬಿಪಿಎಲ್ ಕಾರ್ಡ್ ರದ್ದು: ರೈತರ ಅನ್ನದ ತಟ್ಟೆಗೆ ಕೈಹಾಕಬೇಡಿ: ಕುಮಾರಸ್ವಾಮಿ

0

ಬೆಂಗಳೂರು, ಜೂನ್ 7: ಮನೆಯಲ್ಲಿ ವಾಹನ, ಟ್ರ್ಯಾಕ್ಟರ್ ಇರುವ ರೈತರು ಬಿಪಿಎಲ್ ಕಾರ್ಡ್ ಹಿಂದಿರುಗಿಸಬೇಕು ಎಂದು ಹೇಳಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ವಿರುದ್ಧ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ರೈತರ ಅನ್ನದ ತಟ್ಟೆಗೆ ಕೈ ಹಾಕಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ಈ ಕುರಿತು ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಕೊರೊನಾ ವೈರಸ್ ದಾಳಿ ಆರಂಭಕ್ಕೂ ಮೊದಲು 63 ಸಾವಿರ ಪಡಿತರ ಕಾರ್ಡ್‌ಗಳನ್ನು ರದ್ದುಪಡಿಸಲಾಗಿತ್ತು. ಈಗ ಮತ್ತೆ ಅನರ್ಹ ಮತ್ತು ನಕಲಿ ಪಡಿತರ ಚೀಟಿಗಳ ರದ್ದುಪಡಿಸಲು ಅಭಿಯಾನ ನಡೆಸುವಂತೆ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ರಾಜ್ಯದ ಬೊಕ್ಕಸಕ್ಕೆ ಆಗುವ ಆರ್ಥಿಕ ಹೊರೆ ಕಡಿಮೆ ಮಾಡಲು ಈ ಅಭಿಯಾನ ನೆರವಾಗಲಿದೆ ಎಂದು ಯಡಿಯೂರಪ್ಪ ಹೇಳಿದ್ದರು.

ಆಹಾರ ಮತ್ತು ನಾಗರಿಕ ಸರಬರಾಜು ನಿಗಮಕ್ಕೆ ಬೆಂಬಲ ಬೆಲೆ ಯೋಜನೆಯಡಿ ಬೆಳೆ ಖರೀದಿಗೆ ರೈತರಿಗೆ ಹಣ ಪಾವತಿಸಲು ಬಾಕಿ ಇರುವ 240 ಕೋಟಿ ರೂ. ಆವರ್ತ ನಿಧಿಯಿಂದ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಯಡಿಯೂರಪ್ಪ ಸೂಚನೆ ನೀಡಿದ್ದರು.

Leave A Reply

Your email address will not be published.