EBM News Kannada
Leading News Portal in Kannada

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ದುರ್ಮರಣ: ಹೆಸ್ಕಾಂ ವಿರುದ್ಧ ಆರೋಪ – Kannada News | Belagavi News: Couple dies after being electrocuted by snapped electric wire

0


Belagavi News: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದ ಜಮೀನಿನಲ್ಲಿ ನಡೆದಿದೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ದಂಪತಿಗಳ ಸಾವಿಗೆ ಕಾರಣ ಎಂದು ಆರೋಪ ಕೇಳಿಬಂದಿದೆ.

ಪ್ರಾತಿನಿಧಿಕ ಚಿತ್ರ

ಬೆಳಗಾವಿ, ಆಗಸ್ಟ್​ 06: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ (Couple) ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದ ಜಮೀನಿನಲ್ಲಿ ನಡೆದಿದೆ. ಅಮಿತ್ ದೇಸಾಯಿ(32), ಲತಾ ದೇಸಾಯಿ(27) ಮೃತರು. ವಿದ್ಯುತ್ ಶಾಕ್​ನಿಂದ ಒದ್ದಾಡ್ತಿದ್ದ ಪತಿ ರಕ್ಷಿಸಲು ಹೋಗಿ ಪತ್ನಿಯೂ ಮೃತಪಟ್ಟಿದ್ದಾರೆ. ಬೆಳೆ ಕ್ರಿಮಿನಾಶಕ ಸಿಂಪಡಣೆ ವೇಳೆ ದುರ್ಘಟನೆ ಸಂಭವಿಸಿದೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದಂಪತಿ ಸಾವನ್ನಪ್ಪಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ದಂಪತಿ ಶವಗಳನ್ನ ಬೆಳಗಾವಿ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ವಿದ್ಯುತ್ ತಂತಿ ತಗುಲಿ ಮರದ ಮೇಲೆಯೇ ಪ್ರಾಣ ಬಿಟ್ಟ ವ್ಯಕ್ತಿ

ಚಿಕ್ಕಮಗಳೂರು: ಮರದ ಕೊಂಬೆ ಕಡಿಯಲು ಹೋಗಿ ವ್ಯಕ್ತಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಮರದ ಮೇಲೆಯೇ ಪ್ರಾಣ ಬಿಟ್ಟಿರುವಂತಹ ಘಟನೆ ಮೂಡಿಗೆರೆ ತಾಲೂಕಿನ ಹುಯಿಲುಮನೆ ಗ್ರಾಮದಲ್ಲಿ ನಡೆದಿದೆ. ಲೋಕಪ್ಪ ಗೌಡ (56) ಮೃತ ವ್ಯಕ್ತಿ. ವಿದ್ಯುತ್ ತಂತಿಗೆ ಮರದ ಕೊಂಬೆಗಳು ತಗಲುದ್ದನ್ನು ಕಡಿಯಲು ಹೋಗಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಬಾಳೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಎಲ್​ಎಲ್​ಬಿ ವಿದ್ಯಾರ್ಥಿ ನೇಣಿಗೆ ಶರಣು

ಬೆಂಗಳೂರು: ಎಲ್​ಎಲ್​ಬಿ ವಿದ್ಯಾರ್ಥಿ ನೇಣಿಗೆ ಶರಣಾಗಿರುವಂತಹ ಘಟನೆ ನಾರಗಬಾವಿಯ ಡಿ ಗ್ರೂಪ್ ಲೇಔಟ್​ನ ಶ್ರೀಗಂಧ ಕಾವಲ್​ನಲ್ಲಿ ನಡೆದಿದೆ. ಮೂಲತಃ ಹಿಮಾಚಲ ಪ್ರದೇಶದ ಆರ್ಯನ್ ಕುಮಾರ್ ಆತ್ಮಹತ್ಯೆಗೊಳಗಾದ ವಿದ್ಯಾರ್ಥಿ. 3 ವರ್ಷಗಳಿಂದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.​ ಸ್ಥಳಕ್ಕೆ ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಹಾಡಗಲೇ ಹೋಟೆಲ್​​ನಲ್ಲಿದ್ದ ಇಡ್ಲಿ ಬಾಕ್ಸ್‌ ಕದ್ದು ಪರಾರಿ

ಕೋಲಾರ: ನಗರದ ಬ್ರಾಹ್ಮಣರ‌ ಬೀದಿಯಲ್ಲಿ‌ ಹಾಡಹಗಲೇ ಪುಲಿ ಹೋಟೆಲ್‌ನಲ್ಲಿದ್ದ ಇಡ್ಲಿ ಬಾಕ್ಸ್​ನ್ನು ಕಳ್ಳರು ಕದ್ದೊಯ್ದಿದ್ದಾರೆ. ಹೋಟೆಲ್ ಮಾಲೀಕ ನವೀನ್‌ ಮನೆಗೆ ಹೋಗಿ ಬರುವಷ್ಟರಲ್ಲಿ ಘಟನೆ ನಡೆದಿದೆ. ಇಡ್ಲಿ ಬಾಕ್ಸ್ ಹೊತ್ತೊಯ್ಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ

Leave A Reply

Your email address will not be published.