ಬೆಂಗಳೂರಿನಲ್ಲಿ ಹೆಡ್ ಕಾನ್ಸ್‌ಟೇಬಲ್ ಅನುಮಾನಾಸ್ಪದ ಸಾವು ಪ್ರಕರಣ, ಮರಣೋತ್ತರ ವರದಿಯಲ್ಲಿ ಸ್ಫೋಟ ಅಂಶ ಬಹಿರಂಗ – Kannada News | Bengaluru Head Police Constable Suicide By Consuming Poison Says post mortem report
ಬೆಂಗಳೂರಿನ ವಿಜಯನಗರ ಸಂಚಾರ ಠಾಣೆ ಹೆಡ್ ಕಾನ್ಸ್ ಸ್ಟೇಬಲ್ ನವೀನ್ ಕುಮಾರ್ ಅನುಮಾನಾಸ್ಪದ ಸಾವಿನ ಬಗ್ಗೆ ಮರಣೋತ್ತರ ವರದಿಯಲ್ಲಿ ಸ್ಫೋಟಕ ಅಂಶ ಬಹಿರಂಗವಾಗಿದೆ.
ಮೃತ ನವೀನ್ ಕುಮಾರ್
ಬೆಂಗಳೂರು, (ಆಗಸ್ಟ್ 06): ಬೆಂಗಳೂರಿನ(Bengaluru) ವಿಜಯನಗರ ಸಂಚಾರ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್(Head Constable ) ನವೀನ್ ಕುಮಾರ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟ ಅಂಶ ಬಹಿರಂಗವಾಗಿದೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಆತ್ಮಹತ್ಯೆ(Suicide) ಮಾಡಿಕೊಂಡಿರುವುದು ತಿಳಿದುಬಂದಿದೆ. ಮದ್ಯದದಲ್ಲಿ ವಿಷ ಬೆರೆಸಿಕೊಂಡು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವರದಿ ಹೇಳಿದೆ. ಇದೀಗ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನವೀನ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ವಿಜಯನಗರ ಸಂಚಾರ ಠಾಣೆ ಹೆಡ್ ಕಾನ್ಸ್ ಸ್ಟೇಬಲ್ ನವೀನ್ ಕುಮಾರ್ ಆಗಿದ್ದ ಮೃತ ನವೀನ್ ಅತ್ತಿಗುಪ್ಪೆಯಲ್ಲಿ ವಾಸವಾಗಿದ್ದ ನವೀನ್, ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮದ್ಯದಲ್ಲಿ ವಿಷ ಸೇವಿಸಿ ಬೆರಸಿಸಿಕೊಂಡು ಕುಡಿದ್ದಾರೆ ಎನ್ನಲಾಗಿದೆ. ನಿನ್ನೆ(ಆಗಸ್ಟ್ 06) ಬೆಳಗ್ಗೆ ನವೀನ್ ಫೋನ್ ಕರೆ ಸ್ವೀಕರಿಸದೇ ಇದ್ದಾಗ ಮನೆಗೆ ಹೋಗಿ ಚೆಕ್ ಮಾಡಿದ್ದಾರೆ. ಈ ವೇಳೆ ನವೀನ್ ಮೃತದೇಹ ಪತ್ತೆಯಾಗಿತ್ತು. ಬಳಿಕ ಮೃತದೇವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ಮಾಡಿಸಲಾಗಿತ್ತು. ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ವಿಷ ಸೇವಿಸಿರುವುದು ಪತ್ತೆಯಾಗಿದೆ.
ಇನ್ನಷ್ಟು ಬೆಂಗಳೂರಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ