Karnataka Rains: ಆಗಸ್ಟ್ 14ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ – Kannada News | Rain very likely to occur at most places over Coastal Karnataka and at isolated places over Interior Karnataka till august 14
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 14ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಂಕಿ, ಸುಳ್ಯ, ಶಿರಾಲಿ, ಗೇರುಸೊಪ್ಪ, ಕದ್ರಾ, ಮಂಚಿಕೆರೆ, ಕ್ಯಾಸಲ್ ರಾಕ್, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಸಿದ್ದಾಪುರ, ಜೋಯ್ಡಾ, ಭಾಗಮಂಡಲ, ಲಿಂಗನಮಕ್ಕಿ, ಜಿಕೆವಿಕೆ, ಗುಬ್ಬಿಯಲ್ಲಿ ಮಳೆಯಾಗಿದೆ.
ರಾಜ್ಯಾದ್ಯಂತ ನೈಋತ್ಯ ಮುಂಗಾರು ದುರ್ಬಲವಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಆಗಾಗ ಬಿಸಿಲು ಕಾಣಿಸಿಕೊಳ್ಳುತ್ತಿದೆ, ಬೆಳಗ್ಗೆ ಸಮಯದಲ್ಲಿ ಸ್ವಲ್ಪ ಚಳಿಯೂ ಕಂಡುಬರುತ್ತಿದೆ.
ಮತ್ತಷ್ಟು ಓದಿ:Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆ
ಎಚ್ಎಎಲ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.