ನರ್ಸ್ಗಳನ್ನು ಗುರಿಯಾಗಿಸಿಕೊಂಡು ಹುಬ್ಬಳ್ಳಿಯ ಕಿಮ್ಸ್ನ ಎಂಬಿಬಿಎಸ್ ವಿದ್ಯಾರ್ಥಿಗಳಿಂದ ರಿಲ್ಸ್; ವಿಡಿಯೋ ವೈರಲ್ – Kannada News | Hubballi Kims Hospital MBBS Students Instagram reels gone viral Nurses Complaint
ಹುಬ್ಬಳ್ಳಿಯ ಕಿಮ್ಸ್ನ ವೈದ್ಯಕೀಯ ವಿದ್ಯಾರ್ಥಿಗಳು ಚಲಚಿತ್ರದ ಹಾಡಿಗೆ ರೀಲ್ಸ್ ಮಾಡುವ ಮೂಲಕ ಪೇಚಿಗೆ ಸಿಲುಕಿಕೊಂಡಿದ್ದಾರೆ. ಹೌದು ವೈದ್ಯಕೀಯ ವಿದ್ಯಾರ್ಥಿಗಳು ಆಸ್ಪತ್ರೆಯ ನರ್ಸ್ಗಳನ್ನು ಗುರಿಯಾಗಿಟ್ಟುಕೊಂಡು ಇನ್ಸ್ಟಾಗ್ರಾಮ್ನಲ್ಲಿ ರಿಲ್ಸ್ ಮಾಡಿದ್ದಾರೆ. ಇದಕ್ಕೆ ಕರ್ನಾಟಕ ರಾಜ್ಯ ನರ್ಸ್ ಅಸೋಸಿಯೇಷನ್ ಆಕ್ರೋಶ ವ್ಯಕ್ತಪಡಿಸಿದೆ.
ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಇನ್ಸ್ಟಾಗ್ರಾಮ್ನಲ್ಲಿ (Instagram) ರೀಲ್ಸ್ (Reels) ಮಾಡುವ ಮೂಲಕ ಸಾಕಷ್ಟು ಜನರು ಪ್ರಸಿದ್ಧಿಯಾಗುತ್ತಿದ್ದಾರೆ. ಹಾಗೇ ಟ್ರೋಲ್ ಆಗುತ್ತಿದ್ದಾರೆ. ಹಾಗೆಯೇ ರೀಲ್ಸ್ ಮೂಲಕ ಅದೆಷ್ಟೋ ಪ್ರತಿಭೆಗಳು ಮುನ್ನಲೆಗೆ ಬಂದಿವೆ. ಇದೇರೀತಿ ರಾಜ್ಯದ ಪ್ರಸಿದ್ಧ ಹುಬ್ಬಳ್ಳಿಯ (Hubballi) ಕಿಮ್ಸ್ನ ಆಸ್ಪತ್ರೆಯ (Kims) ವೈದ್ಯಕೀಯ ವಿದ್ಯಾರ್ಥಿಗಳು ಚಲಚಿತ್ರದ ಹಾಡಿಗೆ ರೀಲ್ಸ್ ಮಾಡುವ ಮೂಲಕ ಪೇಚಿಗೆ ಸಿಲುಕಿಕೊಂಡಿದ್ದಾರೆ. ಹೌದು ವೈದ್ಯಕೀಯ ವಿದ್ಯಾರ್ಥಿಗಳು ಆಸ್ಪತ್ರೆಯ ನರ್ಸ್ಗಳನ್ನು ಗುರಿಯಾಗಿಟ್ಟುಕೊಂಡು ಇನ್ಸ್ಟಾಗ್ರಾಮ್ನಲ್ಲಿ ರಿಲ್ಸ್ ಮಾಡಿದ್ದಾರೆ. ಇದಕ್ಕೆ ಕರ್ನಾಟಕ ರಾಜ್ಯ ನರ್ಸ್ ಅಸೋಸಿಯೇಷನ್ ಆಕ್ರೋಶ ವ್ಯಕ್ತಪಡಿಸಿದೆ.
ಯಾವುದೇ ಅನುಮತಿ ಪಡೆಯದೆ ಕಿಮ್ಸ್ ಆಸ್ಪತ್ರೆ ಒಳಗಡೆ ನಟ ಪ್ರಜ್ವಲ್ ದೇವರಾಜ್ ಅಭಿನಯದ ಭದ್ರ ಚಿತ್ರದ “ನಂಬೆಡ ನಂಬೆಡ ಹುಡುಗಿರನ್ನು ನಂಬೇಡ” ಅನ್ನೋ ಹಾಡಿಗೆ ವಿದ್ಯಾರ್ಥಿಗಳು ರೀಲ್ಸ್ ಮಾಡಿದ್ದಾರೆ. ಈ ಹಾಡಿನ ಮಧ್ಯೆ ಬರುವ “ನಂಬೆಡ ನಂಬೆಡ ನರ್ಸ್ಗಳನ್ನು ನಂಬೇಡ” ಸಾಲಿಗೆ ನೃತ್ಯ ಮಾಡಿದ್ದಾರೆ. ಈ ವಿಡಿಯೋವನ್ನು ಮಹೇಶ್ ರೆಡ್ಡಿ ಎಂಬುವ ವಿದ್ಯಾರ್ಥಿಯ ಅಕೌಂಟ್ನಿಂದ ಪೋಸ್ಟ್ ಮಾಡಲಾಗಿದೆ.
ಸದ್ಯ ಈ ವಿಡಿಯೋ ಫುಲ್ ವೈರಲ್ ಆದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ನರ್ಸ್ ಅಸೋಸಿಯೇಷನ್ ಮತ್ತು ಧಾರವಾಡ ಜಿಲ್ಲಾ ಶುಶ್ರೂಷಕರ ಸಂಘ ಕಿಮ್ಸ್ ನಿರ್ದೇಶಕರಿಗೆ ಪತ್ರ ಬರೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 8:59 am, Tue, 8 August 23