ಬೆಂಗಳೂರು: ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನು ಭೇಟಿ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಸಂಸದರೂ ಆಗಿರುವ ನಾರಾಯಣಸ್ವಾಮಿ ಅವರು ಡಿ.ಕೆ ಶಿವಕುಮಾರ್ ಅವರ ಜೊತೆ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ವಿಚಾರವಾಗಿ ಚರ್ಚಿಸಿದ್ದಾರೆ.
ಏನಿದು ಭದ್ರಾ ಮೇಲ್ದಂಡೆ ಯೋಜನೆ?
ಹಲವು ಜಿಲ್ಲೆಗಳಿಗೆ ನೀರು ಒದಗಿಸುವ ಭದ್ರಾ ಮೇಲ್ದಂಡೆ ಯೋಜನೆಯಿಂದ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಹೆಚ್ಚು ಅನುಕೂಲ ಆಗಲಿದೆ. ಕರ್ನಾಟಕ ರಾಜ್ಯದ ಅತ್ಯಂತ ಮಹತ್ವದ ಯೋಜನೆಗಳಲ್ಲಿ ಇದೂ ಕೂಡಾ ಒಂದಾಗಿದ್ದು, ಮಧ್ಯ ಕರ್ನಾಟಕದ ಐದೂವರೆ ಲಕ್ಷ ಎಕರೆ ಕೃಷಿ ಪ್ರದೇಶಕ್ಕೆ ಈ ಯೋಜನೆ ನೀರು ಕೊಡಲಿದೆ. ಈ ಯೋಜನೆಯಿಂದ 787 ಗ್ರಾಮಗಳಿಗೆ ಪ್ರಯೋಜನ ಆಗಲಿದೆ ಎಂಬುದು ನೀರಾವರಿ ತಜ್ಞರ ಲೆಕ್ಕಾಚಾರವಾಗಿದೆ.