ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.26ಕ್ಕೆ ಬೆಂಗಳೂರು ನಗರ ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ.
ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ʼʼಬೆಂಗಳೂರು ಬಂದ್ ದಿನ ಟೌನ್ ಹಾಲ್ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆʼʼ ಎಂದು ತಿಳಿಸಿದರು.
ʼʼಸೆ.26 ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸುವಂತೆ ಮನವಿ ಮಾಡಿಕೊಂಡ ಅವರು, ಇದು ನಮ್ಮ ಬಂದ್ ಅಲ್ಲ, ರಾಜ್ಯದ ರೈತರ ಪರವಾಗಿ ಬೆಂಗಳೂರಿನ ನಾಗರಿಕರ ಬಂದ್ʼʼ ಎಂದು ಅವರು ತಿಳಿಸಿದರು.