ಬೆಂಗಳೂರು, ಸೆ.27: ನಗರದ ವಿವಿಧೆಡೆ ಹಲವು ಮಾಹಿತಿ ತಂತ್ರಜ್ಞಾನ(IT) ಕಂಪೆನಿಗಳ ಮೇಲೆ ಇಂದು ಮುಂಜಾನೆ ಆದಾಯ ತೆರಿಗೆ ಇಲಾಖೆ(IT) ಏಕಕಾಲಕ್ಕೆ ದಾಳಿ ನಡೆಸಿರುವುದು ವರದಿಯಾಗಿದೆ.
ನಗರದ ಸರ್ ಸಿ.ವಿ. ರಾಮನ್ ನಗರ, ಬಾಗಮನೆ ಟೆಕ್ ಪಾರ್ಕ್, ಹುಳಿಮಾವು ಮೊದಲಾದ ಕಡೆಗಳಲ್ಲಿ 10ಕ್ಕೂ ಅಧಿಕ ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ಮಾಡಿ ತಪಾಸಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಆದಾಯ ತೆರಿಗೆ ಪಾವತಿಯಲ್ಲಿ ಕೆಲವು ಕಂಪನಿಗಳು ವಂಚನೆ ಮಾಡುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.