ವಿಜಯನಗರ: ಬಳ್ಳಾರಿ- ವಿಜಯನಗರ ಕ್ಷೇತ್ರದ ಬಿಜೆಪಿ ಸಂಸದ ವೈ. ದೇವೇಂದ್ರಪ್ಪ ಅವರ ಪುತ್ರನ ವಿರುದ್ಧ ಯುವತಿಗೆ ವಂಚನೆ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಯುವತಿ ದೇವೇಂದ್ರಪ್ಪ ಅವರ ಪುತ್ರ ಅವರ ಪುತ್ರ ಪುತ್ರ ರಂಗನಾಥ್ ವಿರುದ್ಧ ಬಸವನಗುಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ಈ ದೂರಿನ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಪ್ರತಿ ದೂರು ದಾಖಲು
ಯುವತಿ ವಿರುದ್ಧ ರಂಗನಾಥ್ ಸಹ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಯುವತಿಯು ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ಹಣ ನೀಡುವಂತೆ ಬ್ಲ್ಯಾಕ್ಮೇಲ್ ಮಾಡುತ್ತಿರುವುದಾಗಿ ರಂಗನಾಥ್ ದೂರಿನಲ್ಲಿ ತಿಳಿಸಿದ್ದಾರೆ.