ಬೆಂಗಳೂರು, ನ. 17: 2023-24ನೆ ಸಾಲಿನಲ್ಲಿ ಎಂ.ಫಿಲ್ ಮತ್ತುಪಿಎಚ್‌ಡಿ ಕೋರ್ಸ್ ಗಳಿಗೆ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಅವಧಿಯನ್ನು ಅಭ್ಯರ್ಥಿಗಳ ಮನವಿಯಂತೆ ನ.30ರ ವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.