ಬೆಂಗಳೂರು: ಎಲ್ಲ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾ-ಕೇಂದ್ರಗಳನ್ನಾಗಿ ರೂಪಿಸಲು “ನಾವು-ಮನುಜರು” ಕಾರ್ಯಕ್ರಮ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
“ನಾವು-ಮನುಜರು” ಎಂಬ ಹೆಸರಿನಲ್ಲಿ ಎಲ್ಲ ಶಾಲಾ-ಕಾಲೇಜುಗಳಲ್ಲಿ ವಾರಕ್ಕೆ ಎರಡು ಗಂಟೆಗಳ ವಿಚಾರ-ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು ಎಂದೂ ಅವರು ಉಲ್ಲೇಖಿಸಿದರು.