EBM News Kannada
Leading News Portal in Kannada

ಹಾಸನ ಪೆನ್‌ ಡ್ರೈವ್‌ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು : ಎಚ್.ಡಿ ಕುಮಾರಸ್ವಾಮಿ

0


ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ವೈರಲ್ ಪ್ರಕರಣದ ಕುರಿತು ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ನೆಲದ ಕಾನೂನಲ್ಲಿ ತಪ್ಪು ಮಾಡಿದವನು ಶಿಕ್ಷೆ ಅನುಭವಿಸಲೇಬೇಕು ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಾಗಲಿ, ಹೆಚ್ ಡಿ ದೇವೇಗೌಡ ಅವರಾಗಲಿ ಈ ರೀತಿಯ ಕೆಲಸ ಮಾಡಿಲ್ಲ. ಹೆಣ್ಣುಮಕ್ಕಳ ವಿಚಾರದಲ್ಲಿ ಗೌರವ ಕೊಟ್ಟು ಅವರ ಸಮಸ್ಯೆ ಬಗೆಹರಿಸಿ ಕಳಿಸಿದ್ದೇವೆ. ಹಾಸನ ಚುನಾವಣಾ ಪ್ರಚಾರ ವೇಳೆ ಪ್ರಕರಣ ಆರಂಭವಾಗಿದೆ. ಈಗಾಗಲೆ ಸಿಎಂ ಎಸ್ ಐಟಿ ತನಿಖೆಗೆ ಆದೇಶ ನೀಡಿದ್ದಾರೆ ಎಂದು ಗಮನಿಸಿದ್ದೇನೆ. ತನಿಖೆ ಆದ್ಮೇಲೆ ಸತ್ಯಾಸತ್ಯತೆ ಹೊರ ಬರಲಿದೆ. ನಾವು ತಪ್ಪು ಮಾಡಿದವರನ್ನು ಕ್ಷಮಿಸುವುದಿಲ್ಲ. ಹೀಗಾಗಿ ತನಿಖೆಯ ವರದಿ ಬಂದ ಮೇಲೆ ಮಾತನಾಡುತ್ತೇನೆ ಎಂದರು.

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ. ವಿದೇಶಕ್ಕೆ ಹೋಗಿದ್ದರೆ ಕರ್ಕೊಂಡು ಬರೋ ಜವಾಬ್ದಾರಿ ಅವರದ್ದು,ನಾನು ಉತ್ತರಿಸಕ್ಕಾಗೋದಿಲ್ಲ. ಅವರೇ ಎಸ್ ಐಟಿ ತನಿಖೆಗೆ ಆದೇಶಿಸಿದ್ದಾರೆ. ಎಸ್ ಐಟಿ ಅಧಿಕಾರಿಗಳನ್ನು ನೇಮಿಸಿದ್ದಾರೆ. ಅವರೇ ಕರ್ಕೊಂಡು ಬರ್ತಾರೆ ಎಂದು ಹೇಳಿದರು.

ರಾಜ್ಯ ಸರ್ಕಾರದ ತೀರ್ಮಾನವನ್ನು ಸ್ವಾಗತಿಸುತ್ತೇನೆ : ಜಿ.ಟಿ. ದೇವೇಗೌಡ

ʼಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಆರೋಪಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೇಮಿಸಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಸ್ವಾಗತಿಸುತ್ತೇನೆʼಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.

ʼಏನು ನಡೆದಿದೆ ಎಂಬುದು ನನಗೆ ಗೊತ್ತಿಲ್ಲ. ಸಿಐಡಿ, ಎಸ್‌ಐಟಿ ಎಲ್ಲವೂ ಸರ್ಕಾರದ ಕೈಯಲ್ಲಿ ಇದೆ. ತನಿಖೆಯಿಂದ ಸತ್ಯ ಹೊರಬರಲಿ. ಚುನಾವಣೆ ಸಂದರ್ಭದಲ್ಲಿ ಎದುರಾಳಿಗಳನ್ನು ಸೋಲಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಾರೆ. ನಾವು ಹೆಣ್ಣು ಮಕ್ಕಳ ಬಗ್ಗೆ ಅಪಾರ ಗೌರವ ಹೊಂದಿದ್ದೇವೆʼ ಎಂದು ಹೇಳಿದರು.

Leave A Reply

Your email address will not be published.