EBM News Kannada
Leading News Portal in Kannada

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸಹಿತ ಹಲವರ ವಿರುದ್ಧ ಪೊಲೀಸ್ ಠಾಣೆಗೆ ದೂರು

0


ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಿದೆ ಎನ್ನಲಾಗಿರುವ ಭೂ ಹಗರಣಕ್ಲೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಬಾಮೈದ ಬಿ.ಎಂ.ಮಲ್ಲಿಕಾರ್ಜುನ, ಭೂ ಮಾಲಕ ಎಂದು ಹೇಳುತ್ತಿರುವ ಜೆ.ದೇವರಾಜು ಮತ್ತು ಕುಟುಂಬದವರು ಸೇರಿದಂತೆ ಅಧಿಕಾರಿಗಳ ಮೇಲೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ಆರ್.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬವರು ದೂರು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಕೆಸರೆಯಲ್ಲಿದ್ದ 3.16 ಎಕರೆ ಜಮೀನನ್ನು ಮುಡಾದವರು ಭೂ ಸ್ವಾಧೀನಪಡಿಸಿಕೊಂಡು ಬಡಾವಣೆ ನಿರ್ಮಿಸಿರುವ ಹಿನ್ನಲೆಯಲ್ಲಿ ಅವರಿಗೆ 50:50 ಅನುಪಾತದಲ್ಲಿ ವಿಜಯನಗರ ಮೂರನೇ ಹಂಹದಲ್ಲಿ 14 ಬದಲಿ ನಿವೇಶನಗಳನ್ನು ನೀಡಲಾಗಿದ್ದು, ಇದು ಅಕ್ರಮ ಎಂಬ ಆರೋಪಗಳು ಕೇಳಿ ಬಂದಿದ್ದವು.

ಈ ಹಿನ್ನಲೆಯಲ್ಲಿ ಆರ್.ಟಿ.ಐ ಕಾರ್ಯಕರ್ತ ಸ್ನೇಯಿಕೃಷ್ಣ ಎಂಬವರು ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ, ಭೂಮಾಲಕ ದೇವರಾಜು ವಿರುದ್ಧ ಪೊಲೀಸ್ ಠಾಣೆಗೆ ದೂರು ನಿಡಿದ್ದಾರೆ. ಇದಲ್ಲದೆ ಇದೇ ಪ್ರಕರಣದಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಉಪ ನೊಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆಯೂ ದೂರು ನೀಡಿದ್ದಾರೆ.

ಈ ಸಂಬಂಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ದೂರನ್ನು ಸ್ವೀಕರಿಸಿರುವ ವಿಜಯನಗರ ಪೊಲೀಸರು, ಹಿಂಬರಹ ನೀಡಿದ್ದು, ನೀವು ನೀಡಿದ ದೂರು ಅರ್ಜಿಯನ್ನು ಪರಿಶೀಲನೆ ನಡೆಸಲಾಗಿರುತ್ತದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ದಿನಾಂಕ-01.07.2024 ರಂದು ಕರ್ನಾಟಕ ಸರ್ಕಾರವು ಆದೇಶ ಸಂಖ್ಯೆನ.ಆ.ಇ.211 ಮೈ.ಅ.ಪ್ರ. 2024 ಬೆಂಗಳೂರು ದಿನಾಂಕ-01.07.2024 ರಂತೆ ಈಗಾಗಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇದರ ಸತ್ಯಾಸತ್ಯೆಯನ್ನು ಅರಿಯಲು ಒಂದು ತನಿಖಾ ತಂಡವನ್ನು ರಚಿಸಿ ಆದೇಶ ಮಾಡಿದ್ದು, ನೀವು ನೀಡಿದ ದೂರು ಕೂಡ ಇದೇ ವಿಚಾರಕ್ಕೆ ಸಂಬಂಧಪಟ್ಟರುವುದರಿಂದ ನಿಮ್ಮ ಅರ್ಜಿಯನ್ನು ವಿಲೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಆರ್.ಟಿ.ಐ.ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವತು ಪೊಲೀಸರಿಗೆ ದೂರು ನೀಡಿದ್ದಷ್ಟೇ ಅಲ್ಲದೆ, ರಾಜ್ಯಪಾಲ, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಪತ್ರ ಬರೆದಿದ್ದಾರೆ. ಪತ್ರದ ಮೂಲಕ ಸ್ನೇಹಮಯಿಕೃಷ್ಣ ಪ್ರಕರಣ ಸಂಬಂಧ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

Leave A Reply

Your email address will not be published.