ಬೆಂಗಳೂರು : ರಾಜ್ಯ ಅಲೈಡ್ ಎಂಡ್ ಹೆಲ್ತ್ ಕೇರ್ ಕೌನ್ಸಿಲ್ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಡಾ.ಎಂ.ವಿ. ಶೆಟ್ಟಿ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಯು.ಟಿ.ಇಫ್ತಿಕಾರ್ ಫರೀದ್ ಅವರನ್ನು ನೂತನ ಅಧ್ಯಕ್ಷರಾಗಿ ರಾಜ್ಯ ಸರಕಾರ ನೇಮಿಸಿದೆ.
ನ್ಯಾಷನಲ್ ಕಮಿಷನ್ ಫಾರ್ ಅಲೈಡ್ ಎಂಡ್ ಹೆಲ್ತ್ ಕೇರ್ ಪ್ರೊಫೆಷನ್ಸ್ ಆಕ್ಟ್ 2021 ರಡಿ ಈ ಹೊಸ ರಾಜ್ಯ ಅಲೈಡ್ ಎಂಡ್ ಹೆಲ್ತ್ ಕೇರ್ ಕೌನ್ಸಿಲ್ ರಚಿಸಲಾಗಿದೆ. ಕೌನ್ಸಿಲ್‌ನ ಸದಸ್ಯರಾಗಿ ಪದನಿಮಿತ್ತ ಸದಸ್ಯರಾಗಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ – ಬೆಂಗಳೂರು ಇದರ ನಿರ್ದೇಶಕರು , ಕಲಬುರಗಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ- ಕಲಬುರಗಿ ಇದರ ನಿರ್ದೇಶಕರು ಹಾಗು ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ – ಹುಬ್ಬಳ್ಳಿಯ ನಿರ್ದೇಶಕರು ನೇಮಕಗೊಂಡಿದ್ದಾರೆ. ಈ ಕೌನ್ಸಿಲ್ ರಾಜ್ಯದಲ್ಲಿ ಎಲ್ಲ ಅಲೈಡ್ ಹಾಗು ಪ್ಯಾರಾ ಮೆಡಿಕಲ್ ಕೋರ್ಸುಗಳ ಕಾಲೇಜುಗಳ ಉಸ್ತುವಾರಿ ನೋಡಿಕೊಳ್ಳಲಿದೆ.
ಸಾಮಾಜಿಕ, ರಾಜಕೀಯ, ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಡಾ.ಯು.ಟಿ.ಇಫ್ತಿಕಾರ್ ಫರೀದ್ ಅವರು ರಾಜೀವ್ ಗಾಂಧಿ ಅರೋಗ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ, ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಯೋತೆರಪಿಸ್ಟ್ಸ್ ಇದರ ರಾಜ್ಯಾಧ್ಯಕ್ಷರಾಗಿ, ಸ್ಪೋರ್ಟ್ಸ್ ಎಂಡ್ ಫಿಟ್ನೆಸ್ ಟ್ರೇನಿಂಗ್ ಫೆಡೆರೇಶನ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ಹಾಗು ಯು.ಟಿ.ಫರೀದ್ ಫೌಂಡೇಶನ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.