ಬೆಂಗಳೂರು : ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.
ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ಬುಧವಾರ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ಕೂಡ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆಗಲೂ ವಿಚಾರಣೆ ನಡೆಸಿದ್ದ ನಡೆಸಿದ್ದ ಸಂತೋಷ್ ಗಜಾನನ ಭಟ್ ಅರ್ಜಿಯನ್ನು ವಜಾಗೊಳಿಸಿದ್ದರು.