ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ ರಾಜ್ಯ ಸಾರ್ವಜನಿಕ ಪರೀಕ್ಷೆ(ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು)ವಿಧೇಯಕ-2023, ಶ್ರೀ ರೇಣುಕಾ ಯಲ್ಲಮ್ಮ ದೇವಾಲಯ ಅಭಿವೃದ್ಧಿ ಪ್ರಾಧಿಕಾರಿ-2023 ಹಾಗೂ ಕರ್ನಾಟಕ ಮುನಿಸಿಪಾಲಿಟಿಗಳು ಹಾಗೂ ಇತರ ಕಾನೂನು(ತಿದ್ದುಪಡಿ) ವಿಧೇಯಕ-2024ಕ್ಕೆ ಸೋಮವಾರ ಅಂಕಿತ ಹಾಕಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರ ಪ್ರಕಟಣೆ ತಿಳಿಸಿದೆ.
ಸದ್ಯ 11 ವಿಧೇಯಕಗಳ ಪೈಕಿ 3 ವಿಧೇಯಕಗಳಿಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಇನ್ನೂ 8 ಬಿಲ್ಗಳಿಗೆ ರಾಜ್ಯಪಾಲರ ಅನುಮೋದನೆ ಪಡೆಯುವುದು ಬಾಕಿ ಇದೆ.