ಕಲಬುರಗಿ: 19ನೇ ಸಚಿವ ಸಂಪುಟದ ಹಿನ್ನೆಲೆಯಲ್ಲಿ ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕ ನಾಯಕ, ದಿ. ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತ ಮಾಜಿ ಸಚಿವ ಎಸ್.ಕೆ.ಕಾಂತ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಸಚಿವ ಶರಣಪ್ರಕಾಶ್ ಪಾಟೀಲ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಡಾ. ಅಜಯಸಿಂಗ್, ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್, ತಿಪ್ಪಣ್ಣಪ್ಪ ಕಮಕನೂರು ಇದ್ದರು.