ಬೆಂಗಳೂರು : ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹಾಗೂ ರಾಜ್ಯ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷೆ ಎನ್. ಮಂಜುಶ್ರೀ ಅವರನ್ನು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.