ಮೈಸೂರು: ಮುಡಾ ಪ್ರಕರಣದ ವಿಚಾರಣೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಲೋಕಾಯುಕ್ತ ವಿಚಾರಣೆ ಅಂತ್ಯಗೊಂಡಿದೆ.
ಸತತ ಎರಡು ಗಂಟೆಗಳವರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದರು.
ಬುಧವಾರ ಬೆಳಿಗ್ಗೆ 10.10ಗಂಟೆಗೆ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಆಗಮಿಸಿದ್ದ ಸಿಎಂ ಸಿದ್ಧರಾಮಯ್ಯ, ಮಧ್ಯಾಹ್ನ 12.07 ಗಂಟೆಗೆ ವಿಚಾರಣೆಮುಗಿಸಿ ಹೊರಬಂದರು.
ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಜಮೀನು ಮಾಲೀಕ ದೇವರಾಜು ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದರು. ಇದೀಗ ಸಿಎಂ ಸಿದ್ಧರಾಮಯ್ಯ ಅವರ ವಿಚಾರಣೆ ಕೂಡ ಅಂತ್ಯಗೊಂಡಿದೆ.