EBM News Kannada
Leading News Portal in Kannada

ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ನಿರ್ದೆಶನ ನೀಡಿಲ್ಲ : ಆಹಾರ ಇಲಾಖೆ ಸ್ಪಷ್ಟೀಕರಣ

0



ಬೆಂಗಳೂರು : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ರಾಜ್ಯದಲ್ಲಿ ಯಾವುದೇ ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ. ಹಾಗೂ ಯಾವುದೇ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿಲ್ಲ ಎಂದು ಆಹಾರ ಇಲಾಖೆ ಇಂದಿಲ್ಲಿ ಸ್ಪಷ್ಟೀಕರಣ ನೀಡಿದೆ.

ಶನಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಇಲಾಖೆ, ‘ಕೆಲವು ಪತ್ರಿಕೆಗಳಲ್ಲಿ ಇ-ಕೆವೈಸಿ ನೋಂದಣಿ ಮಾಡಿಕೊಳ್ಳದ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾಗಿದೆ. ರಾಜ್ಯದಲ್ಲಿ ಸೆಪ್ಟೆಂಬರ್ 2ರಂದು 25,13,798 ಎಪಿಎಲ್ ಕಾರ್ಡುಗಳಿದ್ದವು. ಇಂದು ನ.16ರಂದು 25,62,566 ಕಾರ್ಡುಗಳಿವೆ’ ಎಂದು ವಿವರಣೆ ನೀಡಿದೆ.

‘ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಪರಿಣಾಮ, ಕೆಲವು ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡುಗಳಾಗಿ ಪರಿವರ್ತಿಸಿರುವುದರಿಂದ 48,768 ಕಾರ್ಡುಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ರಾಜ್ಯದಲ್ಲಿ 22ಲಕ್ಷ ಬಿಪಿಎಲ್ ಕಾರ್ಡುಗಳು ರದ್ದಾಗಿವೆ ಎಂದು ಸುದ್ದಿ ಪ್ರಕಟವಾಗಿರುವುದು ಸತ್ಯ ಸಂಗತಿಯಲ್ಲ ಎಂದು ಇಲಾಖೆ ತಿಳಿಸಿದೆ.

Leave A Reply

Your email address will not be published.