EBM News Kannada
Leading News Portal in Kannada

ಪಂಚಮಸಾಲಿ ಹೋರಾಟಗಾರರ ಮೇಲೆ ಅಮಾನವೀಯ ವರ್ತನೆ : ಸಿ.ಟಿ.ರವಿ ಖಂಡನೆ

0



ಬೆಂಗಳೂರು : ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಸಮಾಜದ ಹೋರಾಟಗಾರರ ಮೇಲೆ ರಾಜ್ಯ ಸರಕಾರ ಲಾಠಿಚಾರ್ಜ್ ಮಾಡಿಸಿ ಅಮಾನವೀಯವಾಗಿ ವರ್ತಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ.

ಬುಧವಾರ ಇಲ್ಲಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಲಾಠಿಚಾರ್ಜ್ ಸಂಬಂಧ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದರು.

ಪಂಚಮಸಾಲಿ ಸಮುದಾಯದ ಬೇಡಿಕೆ ಇವತ್ತು ನಿನ್ನೆಯದಲ್ಲ, 2ಎ ಮೀಸಲಾತಿ ಸಂಬಂಧ ಈ ಸರಕಾರ ಅಧಿಕಾರಕ್ಕೆ ಬಂದ ಆರಂಭದಿಂದಲ್ಲೂ ಬೇಡಿಕೆಗಳನ್ನು ಪುನರುಚ್ಚಾರ ಮಾಡುತ್ತಿದ್ದಾರೆ. ಬಿಜೆಪಿ ಸರಕಾರ ಇದ್ದಾಗ 2ಸಿ, 2ಡಿ ಅಡಿ ಎರಡು ರೀತಿ ಮೀಸಲಾತಿ ಕೊಟ್ಟು, ಅದರಡಿಯಲ್ಲಿ ವಿವಿಧ ಸಮುದಾಯಗಳನ್ನು ಒಟ್ಟು ಸೇರಿಸಿ ಮೀಸಲಾತಿ ಹೆಚ್ಚಿಸುವ ಕೆಲಸ ಮಾಡಿತ್ತು ಎಂದರು.

Leave A Reply

Your email address will not be published.